ಅಧಿಕಾರಿಗಳಿಂದ ಸುಳ್ಳು ಮಾಹಿತಿ: ಖಂಡ್ರೆ

ಬೀದರ:ಎ.25: ‘ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ನೂರು ಜನರಿಗೆ ರೆಮ್‌ಡಿಸಿವಿರ್‌ ಕೊಟ್ಟಿಲ್ಲ. ಸರ್ಕಾರ ಸತ್ತಿದೆ. ಜನರನ್ನು ಕೊಲ್ಲುತ್ತಿದೆ. ಅಧಿಕಾರಿಗಳು ಸರ್ಕಾರಕ್ಕೆ ಸುಳ್ಳು ಮಾಹಿತಿ ಕೊಡುತ್ತಿದ್ದಾರೆ’ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.

‘ಆಕ್ಸಿಜನ್‌ ಕೊರತೆಯಿಂದ ಜನ ಸಾವಿಗೀಡಾಗುತ್ತಿದ್ದಾರೆ. ಸರ್ಕಾರ ಜನರಿಗೆ ವೈದ್ಯಕೀಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಸಚಿವರು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ಚಹಾ ಕುಡಿಯಲು ಸಭೆ ಕರೆದರೆ ಏನು ಪ್ರಯೋಜನ. ಅಧಿಕಾರಿಗಳು ದೂರವಾಣಿ ಕರೆಗಳನ್ನೇ ಸ್ವೀಕರಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.