ಅಧಿಕಾರಿಗಳು ಸರ್ಕಾರದ ಆಸ್ತಿಗಳನ್ನು ಜವಾಬ್ದಾರಿಯಿಂದ ಕಾಪಾಡಿ

ರಾಯಚೂರು,ಜು.೧೦-
ರಾಯಚೂರು ನಗರದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಭವನಕ್ಕೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್‌ಎಸ್ ಬೋಸರಾಜು ಅವರು ಭೇಟಿ ನೀಡಿ ವೀಕ್ಷಿಸಿ ಸರಕಾರದ ಆಸ್ತಿಗಳನ್ನು ಜವಾಬ್ದಾರಿಯಿಂದ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಮಂತ್ರಾಲಯ ರಸ್ತೆಯಲ್ಲಿರುವ ಭವನಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ೫ ಕೋಟಿ ೧೪ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ೫೦೦ ಆಸನಗಳ್ಳ ಎಸಿ, ರೂಮ್ ಸೌಲಭ್ಯವುಳ್ಳ ಭವನವನ್ನು ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಭವನವನ್ನು ಜವಾಬ್ದಾರಿಯಿಂದ ಸ್ವಚ್ಛತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಮುಖಂಡರಾದ ಕೆ. ಶಾಂತಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಮಹೇಶ ಪೋತೆದಾರ, ಮಹಾಂತೇಶ, ಜಿ. ಶಿವಮೂರ್ತಿ, ನರಸಿಂಹಲು ಮಾಡಗಿರಿ, ರುದ್ರಪ್ಪ ಅಂಗಡಿ, ಗೋಪಾಲ್ ಖಾನಾಪುರ ನರಸಿಂಹ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.