ಅಧಿಕಾರಿಗಳ ಕಾರ್ಯಕ್ಷಮತೆಗೆ ವಿಚಾರ ಸಂಕಿರಣಗಳು ಸಹಕಾರಿಃ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

ವಿಜಯಪುರ, ಡಿ.1-ಪಶುವೈದ್ಯರ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡ ಎಲ್ಲರೂ ಇದರ ಸದುಪಯೋಗ ಪಡಿಸಿಕೊಂಡು ಭವಿಷ್ಯದಲ್ಲಿ ತಮ್ಮ ಕಾರ್ಯದಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಹೇಳಿದರು.
ನಗರದ ಬಾಗಲಕೋಟ ರಸ್ತೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಪಶುವೈದ್ಯ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಪಶುವೈದ್ಯರ ತಾಂತ್ರಿಕ ವಿಚಾರ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅದರಂತೆ ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿ ಹಾಗೂ ಕಟ್ಟಡ ಸೇರಿದಂತೆ ಇನ್ನೀತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ದೇಶದ ಜನಸೇವೆ ಮಾಡಲು ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ. ಪ್ರಾಣೇಶ್ ಜಹಾಗೀರದಾರ್ ಸೇರಿದಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯ ಸಂಘಗಳ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು