ಅಧಿಕಾರ ಸ್ವೀಕಾರ

ಬ್ಯಾಡಗಿ, ಮೇ1: ತಾಲೂಕ ಪಂಚಾಯತಿಯ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎನ್.ತಿಮ್ಮಾರೆಡ್ಡಿ ಶುಕ್ರವಾರ ಅಧಿಕಾರವನ್ನು ವಹಿಸಿಕೊಂಡರು.
ಸ್ಥಳೀಯ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಎಪ್ರಿಲ್ 30ರಂದು ಸೇವೆಯಿಂದ ನಿವೃತ್ತಿ ಹೊಂದಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎ.ಟಿ.ಜಯಕುಮಾರ ಅವರು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎನ್. ತಿಮ್ಮಾರೆಡ್ಡಿ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತಾಪಂ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ಮೋಹನ ರಾಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.