ಭಾಲ್ಕಿ:ಮೇ.28: ತಾಲೂಕಿನ ಖಾಸಗಿ ಪ್ರಾಥಮಿ ಮತ್ತು ಪ್ರೌಢಶಾಲೆಗಳಲ್ಲಿ 2023-24ನೇ ಸಾಲಿಗೆ ಪಾಲಕರು ತಮ್ಮ ಮಕ್ಕಳನ್ನು ಅಧಿಕೃತವಾಗಿ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ದಾಖಲಾತಿ ಪಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಪ್ರಸ್ತುತ 2023-24ನೇ ಸಾಲಿಗೆ ತಮ್ಮ ಮಕ್ಕಳನ್ನು ದಾಖಲಾತಿ ಬಯಸುವ ಪಾಲಕರು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದಾಖಲೆ ಮಾಡುವ ಪೂರ್ವದಲ್ಲಿ ಆ ಶಾಲೆ ಇಲಾಖೆಯಿಂದ ಅಧಿಕೃತವಾಗಿ ಮಾನ್ಯತೆ ಹೊಂದಿರುವ ಬಗ್ಗೆ ಪರಿಶೀಲಿಸಿ ತಮ್ಮ ಮಕ್ಕಳಿಗೆ ದಾಖಲೆ ಮಾಡಬೇಕು. ಇಲಾಖೆಯಿಂದ ಅಧಿಕೃತವಾಗಿ ಅನುಮತಿ ಪಡೆಯದೇ ಇರುವ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಪಾಲಕರು ದಾಖಲಾತಿ ಮಾಡುವಂತಿಲ್ಲ. ಒಂದು ವೇಳೆ ಇಲಾಖೆಯಿಂದ ಅಧಿಕೃತ ಅನುಮತಿ ಪಡೆಯದೇ ಇರುವ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮಾಡಿದ್ದಲ್ಲಿ ಅದಕ್ಕೆ ಪಾಲಕರೇ ಹೋಣೆಗಾರರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.