ಅಧಿಕ ಮೊತ್ತಕ್ಕೆ `ಮಾರ್ಟಿನ್’  ಆಡಿಯೋ ಹಕ್ಕು ಮಾರಾಟ

 ‌ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರದ ಆಡಿಯೋ ದಾಖಲೆ ಮೊತ್ತೆಕ್ಕೆ ಮಾರಾಟವಾಗಿದೆ. ಉದಯ್ ಕೆ ಮೆಹ್ತಾ ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿ

 ನಟಿಸುತ್ತಿರುವ ಬಹು ನಿರೀಕ್ಷಿತ “ಮಾರ್ಟಿನ್” ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಒಂಭತ್ತು ಕೋಟಿ ರೂಪಾಯಿ ಮಾರಾಟವಾಗಿದೆ. “ಸರೆಗಮ”, ” ಮಾರ್ಟಿನ್ ” ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

ನಿರ್ಮಾಪಕ ಉದಯ್ ಮೆಹ್ತಾ ಮಾಹಿತಿ ನೀಡಿ,ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ” ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.  ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದಿದ್ದಾರೆ…                  

ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣವಿದೆ.

ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್,  ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.