ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

(ಸಂಜೆವಾಣಿ ವಾರ್ತೆ)
ಚನ್ನಮ್ಮನ ಕಿತ್ತೂರ,ಆ4: ಪಿ.ಎಸ್.ಆರ್. ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಸಂಸ್ಥೆ ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಪಾಟೀಲ ಅವರು ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೀರಪ್ಪ ದೇಶನೂರ ಅವರನ್ನು ಪಿ.ಎಸ್.ಆರ್. ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ತಾಲೂಕಾಧ್ಯಕ್ಷರನ್ನಾಗಿ ಮತ್ತು ಉಪಾಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಜುಟ್ಟನವರ ಇವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.