(ಸಂಜೆವಾಣಿ ವಾರ್ತೆ)
ಲಕ್ಷ್ಮೇಶ್ವರ,ಜು29: ತಾಲೂಕಿನ ಆಡರಕಟ್ಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪ್ರೇಮಕ್ಕ ಎಂ ಲಮಾಣಿ ಮತ್ತು ಉಪಾಧ್ಯಕ್ಷರಾಗಿ ಕಾಶವ್ವ ದೊಡ್ಡಮನಿ ಆಯ್ಕೆಯಾದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರುಗಳು ಹಾಜರಿದ್ದರು.