ಸಂಜೆವಾಣಿ ವಾರ್ತೆ
ಗಂಗಾವತಿ, ಜೂ.15: ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ, 1993ರ ಪ್ರಕರಣ 44(2)ರನ್ವಯ ಗ್ರಾಮ ಪಂಚಾಯಿತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ವರ್ಗವಾರು ಸಂಖ್ಯೆಯನ್ನು ನಿಗದಿಪಡಿಸಿರುತ್ತದೆ.
ಈ ಆದೇಶದನ್ವಯ ಕೊಪ್ಪಳ ಜಿಲ್ಲೆಯ 07 ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ 153 ಗ್ರಾಮ ಪಂಚಾಯತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ. ಈ ಸಂಬಂಧ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಸಭೆ ನಡೆಸಲು ದಿನಾಂಕ ಹಾಗೂ ಸ್ಥಳ ನಿಗದಿಪಡಿಸಲಾಗಿದೆ.
ಗಂಗಾವತಿ ತಾಲೂಕಿನ 18 ಗ್ರಾಮ ಪಂಚಾಯತಗಳಿಗೆ ಸಂಬಂಧಿಸಿದ ಸಭೆಯು ಜೂನ್ 19ರಂದು ಬೆಳಗ್ಗೆ 10.30ರಿಂದ ಗಂಗಾವತಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಪ್ರಯುಕ್ತ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಜೂನ್ 19 ರಂದು ಗಂಗಾವತಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಉಪಸ್ಥಿತರಿರಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
One attachment • Scanned by Gmail