ಅನಧಿಕೃತ ಮಗು ದತ್ತು ಬಿಗ್‌ಬಾಸ್ ಖ್ಯಾತಿಯ ನಟಿ ಸೋನು ಸೆರೆ

ಬೆಂಗಳೂರು,ಮಾ.೨೨- ಅನಧಿಕೃತವಾಗಿ ಬಾಲಕಿಯನ್ನು ಮನೆಯಲ್ಲಿ ಇಟ್ಟಿಕೊಂಡಿರುವ ಹಿನ್ನೆಲೆಯಲ್ಲಿ ಬಿಗ್‌ಬಾಸ್ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಕ್ಕಳ ರಕ್ಷಣಾ ಕಚೇರಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಸೋನು ಶ್ರೀನಿವಾಸಗೌಡ ಅವರನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಸೋನುಗೌಡ ಟ್ರೋಲ್ ಆಗಿದ್ದು ,ಮಕ್ಕಳ ಹಕ್ಕು ಕಸಿದಿರುವ ಅರೋಪದ ಮೇಲೆ ಬಂಧಿಸಲಾಗಿದೆ.
ಉತ್ತರ ಕರ್ನಾಟಕದ ೮ ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದೇನೆ ಎಂದು ಹೇಳಿದ್ದ ಸೋನು ಸಿಂಪತಿ ಕಿಟ್ಟಿಸಿಕೊಂಡು ಖ್ಯಾತಿ ಪಡೆಯಲು ಮುಂದಾಗಿದ್ದರು ಎನ್ನುವ ಆರೋಪವಿದೆ.
ದತ್ತು ತೆಗೆದುಕೊಂಡಿರುವ ಕುರಿತು, ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ ವಿಡಿಯೊದಲ್ಲಿ ಮಗುವಿನ ಮಾಹಿತಿ ಹಂಚಿಕೊಂಡಿದ್ದರಿಂದ ಸೋನು ಗೌಡ ಅವರನ್ನು ಜೆಜೆ ಕಾಯ್ದೆ ಅಡಿಯಲ್ಲಿ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕೆಲ ತಿಂಗಳುಗಳಿಂದ ಸೋನು ಗೌಡ ಅವರು ಸೇವಂತಿ ಎನ್ನುವ ಬಾಲಕಿಗೆ ಮನೆಯಲ್ಲಿ ಊಟ ಹಾಕಿಸುವುದು, ಮೂಗು ಚುಚ್ಚಿಸಿ ಮೂಗುತಿ ಹಾಕುವುದು, ಊಟ ಮಾಡಿಸುವ ವಿಡಿಯೋ ಮಾಡಿ, ಅದನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.
ಮನೆಯ ಸುತ್ತ ಇರುವ ನಾಯಿಗಳಿಗೆ ಬಿಸ್ಕಟ್ ಹಾಕುವಾಗ ನನಗೆ ಸೇವಂತಿ ಎನ್ನುವ ೭ ವರ್ಷದ ಮಗುವಿನ ಪರಿಚಯ ಆಯ್ತು ಎಂದು ಸೋನು ಹೇಳಿಕೊಂಡಿದ್ದರು. ಮಾತ್ರವಲ್ಲ ಈ ಮುಂಚೆ ಸೇವಂತಿಯನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದರೆ ಅವರ ತಾಯಿ ಒಪ್ಪಿಲ್ಲ. ಬಳಿಕ ಕಾನೂನ ಪ್ರಕಾರ ಸೇವಂತಿಯನ್ನು ಪಡೆದೆ. ಅದಕ್ಕೆ ೩ ತಿಂಗಳುಗಳೇ ತೆಗೆದುಕೊಂಡಿದೆ. ಬಡ ಹುಡುಗಿಯನ್ನು ಮನೆಗೆ ಕರೆದುಕೊಂಡು ಬಂದಿದ್ದೀನಿ ಎಂದರೆ ಮೆಚ್ಚುಗೆ ಸೂಚಿಸಿ, ಇಲ್ಲ ಅಂದರೆ ಸುಮ್ಮನೆ ಇರಿ. ನೆಗೆಟಿವ್ ಕಮೆಂಟ್ ಮಾಡುವರಿಗೆ ನಾನು ಸೈಬರ್ ಕ್ರೈಂಗೆ ದೂರು ಕೊಡ್ತೀನಿ ಎಂದು ಸೋನು ಈ ಹಿಂದೆ ವಿಡಿಯೋ ಮೂಲಕ ಹೇಳಿಕೊಂಡಿದ್ದರು.
ಮಗು ದತ್ತು ಸಂಬಂಧ ಸೋನು ಗೌಡ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ದೂರು ದಾಖಲಾಗಿತ್ತು.
ಬಕಿನಿ ವಿಡಿಯೋ:
ಮಾಲ್ಡೀವ್ಸ್ ಪ್ರವಾಸದಲ್ಲಿ ಸಖತ್ ಎಂಜಾಯ್ ಮಾಡಿದ್ದ ಬಿಕಿನಿ ಫೋಟೊ ಸಾಕಷ್ಟು ಚರ್ಚೆಯಾಗಿತ್ತು. ಇದೀಗ ಸೋನು ಗೌಡ ಇನ್‌ಸ್ಟಾಗ್ರಾಮ್‌ನಲ್ಲಿ ೧ ಮಿಲಿಯನ್ (೧೦ ಲಕ್ಷ) ಫಾಲೋವರ್ಸ್ ಆಗಿದ್ದಾರೆ. ಹಿಂದೊಮ್ಮೆ ಅವರ ವಿಡಿಯೊ ಒಂದು ಸೋರಕೆಯಾಗಿದ್ದೇ ಸೋನು ಗೌಡ ಪದೇಪದೆ ಟ್ರೋಲ್ ಆಗಲು ಕಾರಣವಾಗಿತ್ತು.
ಸೋನು ಗೌಡ ತಮ್ಮ ನೋವನ್ನು ಈ ಹಿಂದೆ ವಿಡಿಯೊ ಮೂಲಕ ಹಂಚಿಕೊಂಡಿದ್ದರು. ಸೋನು ಗಳಗಳನೇ ಅತ್ತಿದ್ದರು. ಇದರ ಬೆನ್ನಲ್ಲೇ ಮಾಲ್ಡೀವ್ಸ್ ಪ್ರವಾಸದಲ್ಲಿದ್ದರು.
ಕ್ಯಾಡ್ಬರಿಸ್ ಚಿತ್ರದ ಮುಖ್ಯ ಪಾತ್ರದಲ್ಲಿ ಸೋನು ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ನನ್ನ ಪಾತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಅದ್ವಿತಿ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು ಇನ್ನು ಹಲವು ದೊಡ್ಡ ನಟರು ನಟಿಸುತ್ತಿದ್ದಾರೆ.
ಧನ್ಯವಾದ:
ಅವರೆಲ್ಲರ ಜತೆ ನಟಿಸಿದ್ದು ನನಗೆ ಸಂತಸ ತಂದಿದೆ. ಈ ಚಿತ್ರವನ್ನು ರಮೇಶ್ ಯಾದವ್ ಅವರು ನಿರ್ದೇಶನ ಮಾಡುತ್ತಿದ್ದು ಶಿವರಾಜ್ ಜಾಣಗೆರೆರವರು ಈ ಸಿನಿಮಾಗೆ ಕಥೆ, ಚಿತ್ರಕಥೆ, ಸಂಭಾಷಣೆ, ಮತ್ತು ಸಾಹಿತ್ಯ, ಬರೆದು ಸಂಗೀತ ಸಂಯೋಜನೆ, ಮಾಡಿದ್ದಾರೆ.
ಈ ಚಿತ್ರಕ್ಕೆ ಶರತ್ ಕುಮಾರ್ ಅವರ ಛಾಯಾಗ್ರಹಣವಿದ್ದು ಸಿನಿಮಾ ತುಂಬಾ ಸೊಗಸಾಗಿ ಮೂಡಿಬಂದಿದೆ. ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ಮಾಡಿಕೊಟ್ಟ ಈ ಚಿತ್ರದ ನಿರ್ಮಾಪಕರಿಗೂ ನಿರ್ದೇಶಕರಿಗೂ ಹಾಗೂ ಚಿತ್ರತಂಡದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಇತ್ತೀಚೆಗೆ ಪೋಸ್ಟ್ ಹಂಚಿಕೊಂಡಿದ್ದರು.