ಅನಧಿಕೃತ ಮದ್ಯ ಮಾರಾಟ: ಮಹಿಳೆಯರಿಂದ ಧರಣೆ


ಲಕ್ಷ್ಮೇಶ್ವರ, ನ 10: ತಾಲೂಕಿನ ಗೋನಾಳ ಗ್ರಾಮದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಇದರಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿಗೆ ಭಂಗ ಉಂಟಾಗಿದ್ದು ಇದನ್ನು ಕೂಡಲೇ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಗ್ರಾಮದ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಗ್ರಾಮ ಪಂಚಾಯಿತಿ ಆವರಣದಲ್ಲಿ ಕೆಲಕಾಲ ಧರಣಿ ಸತ್ಯಾಗ್ರಹ ನಡೆಸಿದರು.
ಈ ಸುದ್ದಿ ತಿಳಿಯುತ್ತಿದ್ದಂತೆಯೇ ಪೆÇಲೀಸರು ಗ್ರಾಮಕ್ಕೆ ಆಗಮಿಸಿ ಧರಣಿ ನಿರತರೊಂದಿಗೆ ಚರ್ಚಿಸಿ ಅನಧಿಕೃತವಾಗಿ ಮಾರಾಟ ಮಾಡುವವರ ಮೇಲೆ ಕ್ರಮ ಜರುಗಿ ಸುವುದಾಗಿ ಭರವಸೆ ನೀಡಿದ ನಂತರ ಗ್ರಾಮ ಪಂಚಾಯಿತಿಗೆ ಮನವಿ ಪತ್ರ ಸಲ್ಲಿಸಿ ಧರಣಿ ಕೈಬಿಟ್ಟರು.
ಮನವಿ ಪತ್ರದಲ್ಲಿ ಮಹಿಳಾ ಸದಸ್ಯರು ಗ್ರಾಮದಲ್ಲಿನ ಆರು ಜನರು ಮದ್ಯ ಮಾರಾಟ ಮಾಡುವುದನ್ನು ಹೆಸರು ಸಹಿತ ನೀಡಿದ್ದರಿಂದ ಪೆÇಲೀಸರು ಅವರ ಮನೆಗೆ ತೆರಳಿ ಮಾರಾಟ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿ ಇನ್ನು ಮುಂದೆ ಅನಧಿಕೃತವಾಗಿ ಮಾರಾಟ ಮಾಡಿದರೆ ಕಾನೂನು ಕ್ರಮ ವಹಿಸುವುದಾಗಿ ಎಚ್ಚರಿಸಿದರು.
ಸ್ಥಳೀಯ ಪೆÇಲೀಸರು ಸಮಸ್ಯೆ ಶಾಂತಿಯುತವಾಗಿ ಬಗೆಹರಿಸಿದ ನಂತರ ಅಬಕಾರಿ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲ ಮಾಹಿತಿ ಸಂಗ್ರಹಿಸಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರನ್ನು ಕರೆಯಿಸಿ ಅವರಿಗೆ ಅಬಕಾರಿ ಕಾನೂನಿನ ಮಾಹಿತಿ ನೀಡಿ ಇನ್ನು ಮುಂದೆ ಗ್ರಾಮದಲ್ಲಿ ಮದ್ಯ ಮಾರಾಟ ಮಾಡಿದರೆ ಆರು ಜನರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.