ಅನರ್ಹತೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ನವದೆಹಲಿ,ಮಾ.೨೫-ಜನಪ್ರತಿನಿಧಿಗಳ ಅನರ್ಹತೆ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಇಂದು ಅರ್ಜಿ ಸಲ್ಲಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ನಿನ್ನೆಯಷ್ಟೇ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬೆನ್ನೆಲ್ಲೇ ಅರ್ಜಿ ಸಲ್ಲಿಸಲಾಗಿದೆ.
೧೯೫೧ ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ ೮ (೩) ರ ಅನ್ವಯ ಅರ್ಜಿ ಸಲ್ಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಜನಪ್ರತಿನಿಧಿಗೆ ಕನಿಷ್ಟ ೨ ವರ್ಷ ತಕ್ಷಣದಿಂದ ಜಾರಿಗೆ ಬರುವಂತೆ ಅವರ ಸದಸ್ಯತ್ವ ಅನರ್ಹವಾಗಲಿದೆ
೨೦೧೯ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿದ ಸಂದರ್ಭದಲ್ಲಿ ಕಳ್ಳರಿಗೇಕೆ ಮೋದಿ ಉಪನಾಮವಿದೆ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಅವರಿಗೆ ೨ ವರ್ಷ ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಂಡಿದೆ.
ಸೂರತ್ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಅವಕಾಶವಿದೆ. ಶಿಕ್ಷೆಗೆ ಹಾಗೂ ಅನರ್ಹತೆಗೆ ತಡೆ ನೀಡುವ ಅಧಿಕಾರ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ಗೆ ಇದೆ.
ಒಂದು ವೇಳೆ ಸರ್ವೋಚ್ಚ ನ್ಯಾಯಾಲಯದಲ್ಲೂ ಇದೇ ತೀರ್ಪು ಬಂದರೆ ರಾಹುಲ್ ಗಾಂಧಿ ೨ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಲ್ಲದೆ ಶಿಕ್ಷೆ ಪೂರ್ಣಗೊಂಡ ಬಳಿಕ ೬ ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.