ಅನಾಥ ಮಕ್ಕಳಿಗೆ ಭೋಜನ ವ್ಯವಸ್ಥೆ

ಕೋಲಾರ,ನ.೧೭: ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯ ವತಿಯಿಂದ ಪುನೀತ್ ರಾಜಕುಮಾರ್ ಅವರ ೧೯ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ನಗರದ ಕಾರಂಜಿಕಟ್ಟೆ ೧೨ನೇ ಕ್ರಾಸ್‌ನಲ್ಲಿರುವ ನಲ್ಲೂರಮ್ಮ ಅನಾಥಶ್ರಮದ ಮಕ್ಕಳಿಗೆ ಊಟದ ವ್ಯವಸ್ಥೆಯೊಂದಿಗೆ ನೋಟ್ ಪುಸ್ತಕ ಹಾಗೂ ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯ ಜಿಲ್ಲಾಧ್ಯಕ್ಷ ಶೇಷಾದ್ರಿ ಶಾಸ್ತ್ರಿ ಮಾತನಾಡಿ, ದಿವಂಗತ ಪುನೀತ್ ರಾಜಕುಮಾರ್ ಅವರ ನಿಧನದಿಂದ ಇಡೀ ರಾಜ್ಯವೇ ಕಣ್ಣಿರಿನಲ್ಲಿ ಕೈತೊಳೆಯುವಂತಾಗಿದೆ. ಅವರ ಅಗಲಿಕೆಯ ನೋವು ನಮ್ಮನ್ನೆಲ್ಲಾ ಕಾಡುತ್ತಿದೆ.
ಅವರು ತಮ್ಮ ಚಿತ್ರಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡಿರುವುದಲ್ಲದೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗಿದ್ದರು. ಅವರ ಹಾದಿಯಲ್ಲಿ ನಾವು ಸಹ ಸಾಗೋಣ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯ ರಾಜ್ಯಾಧ್ಯಕ್ಷ ಅಗಲಗುರ್ಕಿ ಚಲಪತಿ, ರಾಜ್ಯ ಉಪಾಧ್ಯಕ್ಷ ರಾಮಣ್ಣ, ಕಾರ್ಮಿಕರ ಘಟಕದ ರಾಜ್ಯಾಧ್ಯಕ್ಷ ನಾಗರಾಜ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವೇಣುಗೋಪಾಲ್, ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಮುಳಬಾಗಲು ತಾಲ್ಲೂಕು ಅಧ್ಯಕ್ಷ ಹುಸೇನ್, ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ರಾಜೇಶ್, ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಚನ್ನಕೃಷ್ಣ, ಶಂಕರ್, ಮುನಿರಾಜ್, ತಾಲ್ಲೂಕು ಉಪಾಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು.