
ಜೇವರ್ಗಿ:ಮೇ.23: ತಾಲೂಕಿನ ನೆಲೋಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಟನೂರ ಗ್ರಾಮದ ಮಹಾತ್ಮ ಗಾಂಧಿ ನರೇಗಾ ಯೋಜನೆ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಗ್ರಾ.ಪಂ ಅಮೃತ್ ಆರೋಗ್ಯ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು.
ಗ್ರಾಮೀಣ ಉದ್ಯೋಗ ತಾಲೂಕ ಸಹಾಯಕ ನಿರ್ದೇಶಕ ಸೋಮಶೇಖರ ಜಾಡರ ರವರು ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು..
ಅನಾರೋಗ್ಯದ ಕಡೆ ನಿರ್ಲಕ್ಷ್ಯ ವಹಿಸಿದೆ ಎಲ್ಲರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು..
ನಂತರ ತಾಲೂಕ ಐಇಸಿ ಸಂಯೋಜಕ ಚಿದಂಬರ ಪಾಟೀಲ ಮಾತನಾಡಿ, ರಕ್ತದೊತ್ತಡ, ರಕ್ತಹಿನತೆ, ಸಕ್ಕರೆ ಖಾಯಿಲೆ ಮತ್ತು ಬಿಪಿ ಸ್ಕ್ರೀನಿಂಗ್ ಮಾಡಲಾಗುತ್ತಿದ್ದು, ಅನಾರೋಗ್ಯ ಸಮಸ್ಯೆ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರಪ್ಪ ದಿಗ್ಗಾಂವಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಬಿರದಲ್ಲಿ ಒಟ್ಟು 140 ಜನ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು..
ನೆಲೋಗಿ ಸಮುದಾಯ ಆರೋಗ್ಯ ಕೇಂದ್ರದ ಕೌನ್ಸಲರ್ ಶ್ರೀಮತಿ ನಾಗರತ್ನ, ಡಿಇಒ ಬಸವರಾಜ, ಗ್ರಾ.ಪಂ ಕಾರ್ಯದರ್ಶಿ ಯಲ್ಲಪ್ಪ, ಡಿಇಓ ಶರಣಬಸಪ್ಪ ಗಾಣಿಗೆರ್, ಏಊPಖಿ ತಾ. ಸಂಯೋಜಕ ರಾಘವೇಂದ್ರ ಬಿಲ್ಲಾಡ, ಕರವಸೂಲಿಗಾರ ಮತ್ತು ಕೂಲಿ ಕಾರ್ಮಿಕರು ಹಾಜರಿದ್ದರು.