
ನವದೆಹಲಿ,ಮಾ.3- ಅನಾರೋಗ್ಯದಿಂದಾಗಿ ಕಾಂಗ್ರೆಸ್ ಮಾಜ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಸ್ಪತ್ರೆಯ ಮೂಲಗಳು ತಿಳಿಸಿವೆ
ಜ್ವರದಿಂದ ಬಳಲುತ್ತಿರುವ ಸೋನಿಯಾಗಾಂಧಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತಜ್ಞವೈದ್ಯರ ಮಾರ್ಗದರ್ಶನದಲ್ಲಿ ಸೋನಿಯಾಗಾಂಧಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಡಿಎಸ್ ರಾಣಾ ತಿಳಿಸಿದ್ದಾರೆ.
ವಯೋಸಹಜ ಸಮಸ್ಯೆಯಿಂದ ಹಾಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಇತ್ತೀಚೆಗೆ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿದ್ಸಾರೆ.
ಮೂಲಗಳ ಪ್ರಕಾರ ನಿನ್ನೆ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಎಂದಯ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.