ಅನಾವಶ್ಯಕವಾಗಿ ಓಡಾಡುತ್ತಿದ್ದವರಿಗೆ ದಂಡ

ದಾವಣಗೆರೆ,ಏ.24: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ಸರಪಳಿ ಕತ್ತರಿಸಲು ಘೋಷಿಸಿರುವ ವಾರಾಂತ್ಯದ ಕರ್ಫ್ಯೂ ಮಧ್ಯೆಯು ಅನಾವಶ್ಯಕವಾಗಿ ಓಡಾಡುತ್ತಿರುವವರನ್ನು ತಡೆದು ಪೊಲೀಸರು ದಂಡ ವಿಧಿಸಿದರು.ಬೆಳಿಗ್ಗೆ 10 ಗಂಟೆಯಿಂದ ಜಾರಿಯಾಗಿರುವ ವಾರಾಂತ್ಯದ ಕರ್ಫ್ಯೂ ಕಾರಣ ಜನ ಸಂಚಾರ ವಿರಳವಾಗಿದೆ. ಆದರೂ ಕರ್ಫ್ಯೂ ವಾತಾವರಣ ತಿಳಿಯಲು ರಸ್ತೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ಪಾದಚಾರಿಗಳಿಗೆ, ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಿಸಿ, ಕಾರಣ ಇಲ್ಲದೆ ಅನಗತ್ಯವಾಗಿ ಓಡಾಡುತ್ತಿರುವವರಿಗೆ ಪೊಲೀಸರು 200ರಿಂದ 300 ರೂ. ದಂಡ ಹಾಕುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂತು.
ಮಾಸ್ಕ್ ಧರಿಸದೇ ಓಡಾಡುತ್ತಿರುವವರಿಗೆ 250 ರೂ. ದಂಡ ವಿಧಿಸಿ, ಅನಾವಶ್ಯಕವಾಗಿ ಓಡಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿದರು.