ಅನಿಯಮಿತ ವಿದ್ಯುತ್ ಕಡಿತಕ್ಕೆ ಆಕ್ರೋಶ

ಬಂಗಾರಪೇಟೆ, ಆ. ೧೪: ತಾಲ್ಲೂಕಿನಾದ್ಯಂತ ವಿದ್ಯುತ್‌ನ್ನು ಅವೈಜ್ಞಾನಿಕ ರೀತಿಯಲ್ಲಿ ಕಡಿತಗೊಳಿಸುತ್ತಿರುವುದು ಖಂಡನೀಯ, ರೈತರು ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ಜೊತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಕೋಲಾರ ಜಿಲ್ಲಾ ಸಮಿತಿಯು ಒತ್ತಾಯಿಸಿತು.
ಈ ಮೊದಲು ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಒಂದು ವೇಳೆ ವಿದ್ಯುತ್ ಕಡಿತಗೊಳಿಸುವ ಮುನ್ನ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟಿಸಿ ನಂತರ ವಿದ್ಯುತ್ ಕಡಿತಗೊಳಿಸುತ್ತಿದ್ದರು. ಆದರೆ ಕಳೆದ ಎರಡು-ಮೂರು ತಿಂಗಳಿನಿಂದ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ವಿದ್ಯುತ್ ಕಡಿತಗೊಳಿಸುತ್ತಿದ್ದು,
ಪಟ್ಟಣದ ಬೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಧ್ಯಕ್ಷ ಟಿ.ಎನ್.ರಾಮೇಗೌಡ ಮಾತನಾಡಿ, ಕೆಲವು ಇನ್ಸ್ಪೆಕ್ಟರ್‌ಗಳ ಕುಮ್ಮಕ್ಕಿನಿಂದ ವಿದ್ಯುತ್ ಮಾರ್ಗದಾಳುಗಳು (ಲೈನ್‌ಮನ್) ರೈತರಿಗೆ ತೊಂದರೆಯಾಗುವ ಸನ್ನಿವೇಶಗಳಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷತೆವಹಿಸಿ ಯಾರು ಹಣ ಕೊಡುತ್ತಾರೋ ಅವರಿಗೆ ಸಂಪೂರ್ಣವಾಗಿ ಮತ್ತು ಉತ್ತಮ ರೀತಿಯಲ್ಲಿ ಕೆಲಸ ಮಾಡಿಕೊಡುತ್ತಾರೆ. ಈ ವಿಚಾರವನ್ನು ಕೇಳಿದರೆ ಲೈನ್‌ಮನ್‌ಗಳು ಬೇಜವಾಬ್ದಾರಿತನ ಹಾಗೂ ಉಡಾಫೆಯಿಂದ ನಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತಾವುಗಳು ಇಂತಹ ನಿರ್ಲಕ್ಷತೆಯನ್ನು ಹಾಗೂ ರೈತರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡುತ್ತಿರುವ ಇನ್ಸ್ಪೆಕ್ಟರ್ ಹಾಗೂ ಲೈನ್‌ಮನ್‌ಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಎಸ್.ಜಿ.ವೀರಭದ್ರಸ್ವಾಮಿ, ಜಿಲ್ಲಾ ಕಾರ್ಯದರ್ಶಿ ರಾಮಸಂದ್ರ ರವಿ, ತಾಲ್ಲೂಕು ಅಧ್ಯಕ್ಷ ಮುರಳಿ, ತಾಲ್ಲೂಕು ಸಂಚಾಲಕ ವಿ.ರಮೇಶ್, ಮುನಿವೆಂಕಟಪ್ಪ, ಕೆ.ಪಿ.ನಾರಾಯಣಸ್ವಾಮಿ, ವೆಂಕಟೇಶಪ್ಪ, ವಿ.ಮಂಜುನಾಥ್, ಪಿ.ಮುನಿವೆಂಕಟಪ್ಪ, ಉದಯ್‌ಕುಮಾರ್, ಯಲ್ಲಪ್ಪ, ರಾಮಕೃಷ್ಣ, ಶ್ರೀನಿವಾಸ.ಎನ್, ವೆಂಕಟಮುನಿಯಪ್ಪ, ಶ್ರೀನಿವಾಸಪ್ಪ, ಪ್ರೇಮ್‌ಕುಮಾರ್.ಎಸ್, ಕೆ.ಎಂ.ನಾರಾಯಣಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.