ಅನಿರೀಕ್ಷಿತ ದಾಳಿ ನಡೆಸಿ ಮೂರು ಬಾಲಕಾರ್ಮಿಕರ ರಕ್ಷಣೆ

ಕಲಬುರಗಿ,ಸೆ.19: ಮಂಗಳವಾರ ನಗರದÀ ವಿವಿಧ ಅಂಗಡಿ, ಉದ್ದಮೆ, ಹೋಟೆಲ್, ಗ್ಯಾರೇಜ್ ಮತ್ತು ಕಿರಾಣಾ ಅಂಗಡಿಗಳ ಮೇಲೆ ಅನಿರೀಕ್ಷತ ದಾಳಿ ಹಾಗೂ ತಪಾಸಣೆ ಕಾರ್ಯದ ಸಂದರ್ಭದಲ್ಲಿ 3 ಜನ ಬಾಲಕಾರ್ಮಿಕ ಮಕ್ಕಳನ್ನು ಗುರುತಿಸಿ, ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ಈ ಬಾಲಕರನ್ನು ನೇಮಿಸಿಕೊಂಡ ಅಂಗಡಿ ಮಾಲೀಕನ ಮೇಲೆ ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) 1986 ತಿದ್ದುಪಡಿ ಕಾಯ್ದೆ 2016 ರಡಿ ಪ್ರಕರಣ ದಾಖಲಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಪೋಲಿಸ್ ಇಲಾಖೆ ಇವರಗಳ ನೇತೃತ್ವದ ಸಹಭಾಗಿತ್ವದಲ್ಲಿ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಲಾಯಿತು.
ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಪೋಸ್ಟರಗಳನ್ನು ನೀಡಿ ಅರಿವು ಮೂಡಿಸಲಾಯಿತು.
ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಹಾಗೂ ಸಂಸ್ಥೆಯ (ವಾರೆಂಟ್ ರಹಿತ ಬಂದಿಸಬಹುದಾದ) ಅಪರಾಧವಾಗಿದೆ ಎಂದು ಅರಿವು ಮೂಡಿಸಲಾಯಿತು.
ಮಕ್ಕಳ ಬಾಲ್ಯವನ್ನು ಉಳಿಸೋಣ, ಅವರ ದುಡಿತ ತಪ್ಪಿಸಿ, ವಿದ್ಯ ಆರೋಗ್ಯವನ್ನು, ಒದಗಿಸಿ ದೇಶದ ಉನ್ನತಿಗೆ ಶ್ರಮಿಸೋಣ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಲು ಪೋಷಕರು ಮತ್ತು ಸಾರ್ವಜನಿಕರಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ 1986 ರ ಕುರಿತು ಪೋಸ್ಟರಗಳನ್ನು ನೀಡಿ ಅರಿವು ಮೂಡಿಸಲಾಯಿತು.
ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರಡಿ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ ರೂ. 20,000/- ರಿಂದ 50,000/- ರ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪೋಷಕರಾಗಿದ್ದಲ್ಲಿ ಲಘು ಶಿಕ್ಷಾ ಪ್ರಾವಧಾನವಿದ್ದು, ಪುನರಾವರ್ತಿತ ಅಪರಾಧಕ್ಕೆ ರೂ. 10,000/- ಗಳ ದಂಡವನ್ನು ವಿಧಿಸಬೇಕಾಗಿರುತ್ತದೆ.
ಗೌರವಾನ್ವಿತ ಭಾರತದ ಸವೋಚ್ಛ ನ್ಯಾಯಾಲಯವು ರೀಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜನೆಗೊಂಡ ಪ್ರತಿ ಮಗುವಿಗೆ 20,000 ರೂ. ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗಿರುತ್ತದೆ.
6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕಿಯೆಗಳನ್ನು ಹಾಘೂ 18 ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ (ಫ್ಯಾಕ್ಟರಿ, ಮೈನ್ಸ್, ಕೇಮಿಕಲ್ಸ್ ಮತ್ತು ಎಕ್ಸಪ್ಲೋಜಿವ್) ದುಡಿಯುವುದು ಕಂಡು ಬಂದಲ್ಲಿ ಚೈಲ್ಡ್ ಲೈನ್ -1098 ಅಥವಾ ದೂರವಾಣಿಗೆ ಸಂಖ್ಯೆಗಳಿಗೆ 080-22453549, 08472-256295, 269347, 275278 ಗಳಿಗೆ ಸಂಪರ್ಕಿಸಬೇಕು.
ಈ ದಿಢೀರ ತಪಾಸಣೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ್, ಹಿರಿಯ ಕಾರ್ಮಿಕ ನಿರೀಕ್ಷಕರಾದ ರವೀಂದ್ರಕುಮಾರ ಬಲ್ಲೂರ. ಕೆ.ಎಸ್. ಪ್ರಸನ್ನ ಕವಿತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಬಸವರಾಜ, ಮಕ್ಕಳ ಸಹಾಯವಾಣಿ ಅಧಿಕಾರಿಗಳಾದ ಬಸವರಾಜ ಟೆಂಗಳಿ, ಮಲಯ್ಯಾ ಗುತ್ತೆದಾರ ಸುಂದÀರ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕಾರ್ಯಕಾರಿ ಸದಸ್ಯ ಶಿವಕುಮಾರ ರೇಷ್ಮೆ ಅವರು ಉಪಸ್ಥಿತರಿದ್ದರು.