ಕಲಬುರಗಿ,ಮಾ,23:ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಯು ದಿನಾಂಕ:24-03-2023 ರಂದು ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 24 ರಂದು ಶುಕ್ರವಾರ ಸಾರಿಗೆ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸರ್ಕಾರದ ಆದೇಶದ ಬಗ್ಗೆ ಮನವರಿಕೆ ಮಾಡಿಕೊಡಲಾಗಿರುತ್ತದೆ.
ರಾಜ್ಯ ಸರ್ಕಾರವು ದಿನಾಂಕ:17-03-2023 ರಂದು ಸಾರಿಗೆ ನೌಕರರ/ಅಧಿಕಾರಿಗಳ ಮೂಲವೇತನಕ್ಕೆ ಶೇ.15 ರಷ್ಟು ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿ ಆದೇಶ ಹೊರಡಿಸಿರುವ ಪ್ರಯುಕ್ತ, ಜಂಟಿ ಕ್ರಿಯಾ ಸಮಿತಿಯು ಈಗಾಗಲೇ ಇದೇ ಮಾರ್ಚ್ 21 ರಂದು ಮುಷ್ಕರಕ್ಕೆ ಕರೆ ನೀಡಿರುವುದನ್ನು ಹಿಂಪಡೆದಿರುತ್ತದೆ ಎಂದು ಅವರು ತಿಳಿಸಿದ್ದಾರೆ.