ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಪಿ.ರಾಜೀವ ಭೇಟಿ

ಶಹಾಪುರ ನ 13:ಯಾದಗಿರಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಸತತ ಮೂರು ದಿನಗಳ ಕಾಲ ವಿವಿಧ ಬೇಡಿಕೆ ಈಡೇರಿಕೆಗಾಗಿ ಹಾಗೂ ಕೆಲ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ನಿತಿ ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ನವೆಂಬರ್ 9 ರಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಮ್ಮಿಕೊಂಡಿದ್ದ ನಿರಂತರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಎಸ್ಸಿ & ಎಸ್ಟಿ ಆಯೋಗದ ಸದಸ್ಯರಾದ ಹಾಗೂ ಕುಡಚಿ ಶಾಸಕರಾದ ಪಿ.ರಾಜೀವ್ ರವರು ಭೇಟಿ ನೀಡಿ ಧರಣಿ ನಿರತ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರ ಜೊತೆಗೆ ಚರ್ಚಿಸಿ ತಮ್ಮ ಬೇಡಿಕೆಗಳನ್ನು ಆಯೋಗದ ಅಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿ ಮನವೊಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಹೋರಾಟಗಾರರ ಕೆಲಸಗಳು ಬೇಗನೆ ವಿಳಂಬ ನಿತಿ ಅನುಸರಿಸದಿರಲು ಸೂಚಿಸಿದರು ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದಾಗ ಹೋರಾಟವನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ಪಿ ರಾಜೀವ್ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು.