ಅನಿಲಕುಮಾರ ಪಾಟೀಲ್‍ಗೆ ಸನ್ಮಾನ

ಹುಬ್ಬಳ್ಳಿ,ನ9-ಇತ್ತೀಚಿಗೆ ನವಲಗುಂದ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ್ ಜಾಧವ್ ಅವರು ನವಲಗುಂದ ಪುರಸಭೆ ಸದಸ್ಯರೊಂದಿಗೆ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಆಗಮಿಸಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಪಾಟೀಲ್‍ರಿಗೆ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದ ಅನೀಲ್ ಕುಮಾರ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷದ ಜಾತ್ಯಾತೀತ ನಿಲುವನ್ನು ಎತ್ತಿ ಹಿಡಿದು ಪಕ್ಷ ಸಂಘಟನೆ ಮಾಡಬೇಕೆಂದು ಹಾಗೂ ನವಲಗುಂದ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.