ಅನುಗ್ರಹ ಕಣ್ಣಿನ ಆಸ್ಪತ್ರೆ ಆವರಣದಲ್ಲಿ 75ನೇ ಗಣರಾಜ್ಯೋತ್ಸವ

ಕಲಬುರಗಿ:ಜ.26: 75ನೇ ಗಣರಾಜ್ಯೋತ್ಸವ ಅಂಗವಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ (ಭೋರುಕಾ ನೇತ್ರಾಲಯದ) ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆಯ (ಭೋರುಕಾ ನೇತ್ರಾಲಯದ) ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ವಿನೀತ್ ಭೀಮಶೆಟ್ಟಿ, ಆಸ್ಪತ್ರೆಯ ವೈದ್ಯರಾದ ಡಾ. ವೆಂಕಟೇಶ್ ಕಾಳಾಪುರ, ಡಾ ವಿನೂತ್ ಆನಂದಿ ಸೇರಿದಂತೆ ಆಸ್ಪತ್ರೆ ಆಡಳಿತಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿವರ್ಗದವರು ಇದ್ದರು.
ಡಾ. ವಿನೀತ್ ಭೀಮಶೆಟ್ಟಿ ಅವರು ಮಾತನಾಡಿ ನಮ್ಮ ಆಸ್ಪತ್ರೆಯಲ್ಲಿ ಅಚ್ಚುಕಟ್ಟಾಗಿ ನಡೆದು ಬರುತ್ತಿರುವ ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆ ಬಗ್ಗೆ ಹೆಮ್ಮೆ ವ್ಯಕ್ತ ಪಡಿಸಿದರು. ಇದೆ ರೀತಿ ಮುಂದೆಯೂ ಕೂಡಾ ಕಣ್ಣಿನ ರೋಗಿಗಳ ಹಾಗೂ ಸಮಾಜ ಸೇವೆ ಮಾಡಲು ಆಸ್ಪತ್ರೆಯ ಸಿಬ್ಬಂದಿಯವರಿಗೆ ಪೆÇ್ರೀತ್ಸಾಹ ತುಂಬಿದರು. ಕಾರ್ಯಕ್ರಮವನ್ನು ಆಡಳಿತಾಧಿಕಾರಿಗಳಾದ ಟಿ.ಎಸ್. ಡೇರೆದ ಹಾಗೂ ಅನಿಲ ರೆಡ್ಡಿ ಅವರು ಅಚ್ಚುಕಟ್ಟಾಗಿ ನೆರವೇರಿಸಿ ಕೊಟ್ಟರು. ರಾಷ್ಟ್ರೀಯ ಹಬ್ಬವನ್ನು ಉತ್ಸಾಹದಿಂದ ಆಚರಿಸಲಾಯಿತು.