ಅನುಭವ ಮಂಟಪ ನಿರ್ಮಾಣಕ್ಕೆ 100 ಕೋಟಿ ರೂ ಬಿಡುಗಡೆ

ಬೀದರ್, ಜ 7- ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಲಾಗಿದ್ದು ಇನ್ನೊಂದು‌ ವಾರದೊಳಗೆ ಇನ್ನೂ 100 ಕೋಟಿ ರೂ. ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆ ಅಂತ್ಯಗೊಂಡ ತಕ್ಷಣ ಕಾಮಗಾರಿ ಗೌರವ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.
ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅದೇ ರೀತಿ ಎರಡು ವರ್ಷಗಳ ಅವಧಿಯಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಿ ಪ್ತಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಅವರು ಇವರು ಎನ್ನದೆ ಎಲ್ಲ ಸಮುದಾಯದ ಜನರು ಸೇರಿ ಚಿಂಥನ ಮಂಥನ ನಡೆಸುತ್ತಿದ್ದ, ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಅನುಭವ ಮಂಟಪದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ನನ್ನ ಬದುಕು ಪಾವನವಾಯ್ತು ಎಂದು ಹೇಳಲು ಹೆಮ್ಮೆ ಅನಿಸುತ್ತದೆ ಎಂದರು. ನಮ್ಮ ಜೀವನದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ ಎಂದರು.