ಅನೈತಿಕ ಸಂಬಂಧ ಪ್ರಿಯಕರನ ಜೊತೆ ಪತಿ ಕೊಂದ ಪತಿ

ಬೆಂಗಳೂರು,ನ.12-ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ಬಂಧಿತ ಆರೋಪಿಗಳಾಗಿದ್ದಾರೆ. ಇದೇ ತಿಂಗಳ ನವೆಂಬರ್ 6ರಂದು ಪತಿ ರಾಕೇಶ್ ತೋಮಂಗನನ್ನು ಕೊಲೆ ಮಾಡಲಾಗಿತ್ತು.
ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ನಡುವೆ ಅನೈತಿಕ ಸಂಬಂಧ ಇತ್ತು. ಈ ವಿಚಾರ ತಿಳಿದ ರಾಕೇಶ್ ತೋಮಂಗ ಪ್ರಶ್ನೆ ಮಾಡಿದ್ದ. ಈ ವೇಳೆ ಪತ್ನಿ ಮತ್ತು ಪ್ರಿಯಕರ ಸೇರಿ ತೋಮಂಗನನ್ನು ಕೊಲೆ ಮಾಡಿದ್ದಾರೆ.
ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.