ಅನ್ನಭಾಗ್ಯ ಅಕ್ರಮ ಅಕ್ಕಿ ಸಾಗಾಣಿಕೆ – ಓರ್ವನ ಬಂಧನ

ರಾಯಚೂರು.ನ.೨೪- ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಆಟೋ ಮೇಲೆ ದಾಳಿ ಮಾಡಿ, ಅಕ್ರಮ ಅಕ್ಕಿ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಗದ್ವಾಲ್ ರಸ್ತೆಯಲ್ಲಿರುವ ಜಮಲಮ್ಮ ದೇವಸ್ಥಾನದಲ್ಲಿ ಆಟೋದಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿತ್ತು. ಎಲ್‌ಬಿಎಸ್ ನಗರದ ಚಂದ್ರಶೇಖರ ಎನ್ನುವವರು ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಸುಮಾರು ೧೨ ಸಾವಿರ ಮೌಲ್ಯದ ೬ ಕ್ವಿಂಟಾಲ್ ಅಕ್ಕಿ ಹಾಗೂ ಆಟೋ ವಶಪಡಿಸಿಕೊಳ್ಳಲಾಗಿದೆ. ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಪಡಿತರ ಅಕ್ಕಿಯನ್ನು ಖರೀದಿಸಿ, ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ಆಹಾರ ಇಲಾಖೆಯ ಅಧಿಕಾರಿಗಳು ಪೊಲೀಸರೊಂದಿಗೆ ದಾಳಿ ನಡೆಸಿ, ಆರೋಪಿ ಸಹಿತ ಅಕ್ಕಿ ವಶಪಡಿಸಿಕೊಂಡು ನೇತಾಜಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.