ಅನ್ನಸಂತರ್ಪಣೆ-ಮಾಸ್ಕ್ ವಿತರಣೆ

ಕೋಲಾರ,ಮೇ.೨೧: ಕೋವಿಡ್-೧೯ ನಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಅಸಂಘಟಿತ ಕಾರ್ಮಿಕರು, ಬಡವರು, ಶ್ರಮಿಕರಿಗೆ ಕೋಲಾರ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಉಚಿತವಾಗಿ ಅನ್ನಸಂತರ್ಪಣೆ, ಮಾಸ್ಕ್ ಮತ್ತು ಸ್ಯಾನಿಟೈಸರ್‍ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಪಿ.ಅಮರೇಶ್ ಮಾತನಾಡಿ ಇಡೀ ವಿಶ್ವವೇ ಕೊರೋನಾ ರೋಗದಿಂದ ತತ್ತರಿಸಿಹೋಗಿದ್ದು, ಇಂತಹ ಸಂದರ್ಭದಲ್ಲಿ ಜನರು ಕೆಲಸವಿಲ್ಲದೆ ಒಪೊ?ಪತ್ತಿನ ಊಟಕ್ಕೂ ಪರದಾಡುವಂತಹ ಸನ್ನಿವೇಶ ಸೃಷ್ಟಿಯಾಗಿತ್ತು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವು ೧೨೫೦ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಿದೆ ಎಂದು ಹೇಳಿದರು. ಅದರಂತೆ ಕೋಲಾರ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳು ಕೋಲಾರ ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಡವರಿಗೆ, ಕಾರ್ಮಿಕರಿಗೆ ಅನ್ನಸಂತರ್ಪಣೆ, ಮಾಸ್ಕ್ ಮತ್ತು ಸ್ಯಾನಿಟೈಸರ್‍ನ್ನು ವಿತರಿಸಲಾಗಿದ್ದು, ಈ ಕಾರ್ಯವು ನಿರಂತರವಾಗಿ ಮುಂದುವರೆಯಲಿದೆ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಳಹಸ್ತಿಪುರ ಅಂಬರೀಶ್ ಮಾತನಾಡಿ ಕೋವಿಡ್-೧೯ ರೋಗದಿಂದ ದೇಶದ ಜನರನ್ನು ಮುಕ್ತಗೊಳಿಸಲು ಪ್ರಧಾನ ಮಂತ್ರಿ ನರೇಂದ್ರಮೋದಿ ನಿರಂತರವಾಗಿ ಶ್ರಮಿಸುತ್ತಿದ್ದು, ಪ್ರಧಾನ ಮಂತ್ರಿಯವರ ಈ ಕಾರ್ಯಕ್ಕೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಕೈಗೊಂಡ ಕಟ್ಟು ನಿಟ್ಟಿನ ಕ್ರಮಗಳಿಂದಾಗಿ ದೇಶದಲ್ಲಿ ಸಾವಿನ ಪ್ರಮಾಣವು ಕಡಿಮೆಯಾಗಿದ್ದು, ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ನಮ್ಮ ದೇಶದಲ್ಲಿ ಸಾವಿನ ಪ್ರಮಾಣವು ಇಳಿಕೆಯಾಗಿದೆ ಎಂದು ಪ್ರಧಾನಿಯವರ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬಿಸುರೇಶ್, ಬಂಗವಾದಿ ನಾಗರಾಜ್, ಟಮಕ ರಮೇಶ್, ಕೋಲಾರ ಸೂರಿ, ಕೆ.ಜಿ.ಎಫ್ ಲೋಹಿತ್, ಚೋಳಂಗುಂಟೆ ಚಲಪತಿ, ಮತ್ತಿತರರು ಹಾಜರಿದ್ದರು.