ಚಾಮರಾಜನಗರ, ಜೂ.21:- ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಇಂದು ಚಾಮರಾಜನಗರದಲ್ಲಿ ಕೈ ಕಹಳೆ ಮೊಳಗಿಸಿತು.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಸಚಿವ ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗ ಶೆಟ್ಟಿ ಹಾಗೂ ಎ.ಆರ್.ಕೃಷ್ಣಮೂರ್ತಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.
ಶ್ರೀ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮಂತ್ರಿ ನರೇಂದ್ರ ಮೋದಿ. ಕೇಂದ್ರಆಹಾರ ಸಚಿವ ವಿರುದ್ಧ ದಿಕ್ಕಾರ ಘೋಷಣೆಗಳನ್ನು ಕೂಗಿ. ಆಕ್ರೋಶ ವ್ಯಕ್ತಪಡಿಸಿದರು
ಪ್ರತಿಭಟನೆ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ. ರಾಜ್ಯ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ. ಜುಲೈ ಒಂದರಿಂದ. ಒಬ್ಬರಿಗೆ. ಹತ್ತು ಕೆಜಿ ಅಕ್ಕಿ ಕೊಡಲು ನಿರ್ಧಾರ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ. ಅಕ್ಕಿ ಬಿಡುಗಡೆ ಮಾಡಿದೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು
ಪ್ರತಿಭಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ ಆರ.ಕೃಷ್ಣಮೂರ್ತಿ. ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್. ಮಾಜಿ ಶಾಸಕ ನರೇಂದ್ರ ಮಾಜಿ ಸಂಸದ ಎಮ್ ಶಿವಣ್ಣ ಮಾಜಿ ಶಾಸಕ ಜಿ ಏನ್ ನಂಜುಂಡಸ್ವಾಮಿ… ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಮಧಸ್ಕರ್ ಮುನ್ನ. ಮುಖಂಡರಾದ ಕಾಗಲವಾಡಿಚಂದ್ರು.ಶಿವ ಸ್ವಾಮಿ. ಸೋಮ ನಾಯಕ. ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು. ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಈ ವೇಳೆ ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲುಒಪ್ಪಿಗೆಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ದುಡ್ಡು ಕೊಡುತ್ತೇವೆ ಎಂದು ಹೇಳಿದರು ಅಕ್ಕಿಕೊಡಲು ಮೀನಾಮೇಷ ಎಣಿಸುತ್ತಿದೆ. ಅಕ್ಕಿ ನೀಡಿದರೆ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಇದನ್ನು ತಪ್ಪಿಸಲು ಅಕ್ಕಿ ನೀಡುತ್ತಿಲ್ಲ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಗಣೇಶ್‍ಪ್ರಸಾದ್, ಮಾಜಿ ಶಾಸಕರುಗಳಾದ ಜಿ.ಎನ್. ನಂಜುಂಡಸ್ವಾಮಿ, ಎಸ್. ಜಯಣ್ಣ, ಮಾಜಿ ಸಂಸದ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಗುರುಸ್ವಾಮಿ, ತೋಟೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಸೇರಿದಂತೆ ಹಲವಾರು ಮುಖಂಡರು ಕಾರ್ಯಕರ್ತರು ಹಾಜರಿದ್ದರು.