ಅನ್ಯ ಜಾತಿಯವರಿಗೆ ಎಸ್.ಟಿ ಮೀಸಲಾತಿ ಕೇಂದ್ರಕ್ಕೆ ಶಿಫಾರಸ್ಸು ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಆಗ್ರಹ

ವಿಜಯಪುರ,ಫೆ.21:ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ವತಿಯಿಂದ ಗಂಗಾಮತ, ಅಂಬಿಗ, ಡೋರ, ಟೋಕರೆ ಕೋಳಿ, ಗೊಂಡಾ ರಾಜಗೊಂಡ, ಕುರುಬ, ಅನ್ಯ ಜಾತಿಗಳಿಗೆ ಎಸ್.ಟಿ. ಜಾತಿ ಪ್ರಮಾಣ ಪತ್ರವನ್ನು ನೀಡಲು ಆದೇಶ ನೀಡಿದ್ದನ್ನು ತಕ್ಷಣ ರಾಜ್ಯ ಸರ್ಕಾರ ಹಿಂಪಡೆಯುವ ಕುರಿತು ಅನ್ಯ 39 ಜಾತಿಗಳನ್ನು ಪರಿಶಿಷ್ಟ ಪಂಗಡದ ಎಸ್.ಟಿ. ಜಾತಿಗಳಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸರ್ಕಾರ ಶಿಫಾರಸ್ಸು ಮಾಡಿದ್ದನ್ನು ವಾಪಸು ಪಡೆಯುವ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರÀ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ರಾಜ್ಯದಲ್ಲಿ ನಕಲಿ ಎಸ್.ಟಿ. ಪ್ರಮಾಣ ಪತ್ರಗಳ ತನಿಖೆಗೆ ಒಂದು ಕ್ರಿಯಾ ಸಮಿತಿಯನ್ನು ರಚಿಸಬೇಕು. ಹರಿಹರ ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತಿ ಸಿದ್ದರಾಮಯ್ಯ ನೀಡಿರುವ ಅಸಂವಿಧಾನಿಕ ಹೇಳಿಕೆಯನ್ನು ಹಿಂಪಡೆಯಬೇಕು. ಈ ಹೇಳಿಕೆಯಿಂದ ರಾಜ್ಯದಲ್ಲಿ ಇನ್ನಷ್ಟು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸರ್ಕಾರವೇ ಅವಕಾಶ ನೀಡಿದಂತಾಗುತ್ತದೆ. ಇದರಿಂದ ವಾಲ್ಮೀಕಿ ಸಮಾಜಕ್ಕೆ ತುಂಬಾ ಅನ್ಯಾಯವಾಗುತ್ತದೆ. ಎಸ್.ಟಿ. ಶೇ.7ರಷ್ಟು ಮೀಸಲಾತಿಯನ್ನು ಇನ್ನೂ ಜಾರಿಯಾಗಿರುವುದಿಲ್ಲ. ತಕ್ಷಣ 9 μÉಡ್ಯೂಲ್‍ನಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಆದೇಶ ಮಾಡಬೇಕು. ವಾಲ್ಮೀಕಿ ಸಮಾಜದ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಹೋರಾಟಕ್ಕೆ ಬೆಂಬಲ ನೀಡಬೇಕು. ಒಂದು ವೇಳೆ ಬೆಂಬಲ ನೀಡದಿದ್ದರೆ ಎಸ್.ಟಿ. ಮೀಸಲು ಕ್ಷೇತ್ರದಿಂದ ಆರಿಸಿ ಬಂದ ಎಲ್ಲರೂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಕೊಪ್ಪಳ ಜಿಲ್ಲೆಯ ಗಂಗಾವತಿಯ ತಾಲ್ಲೂಕಿನ ಐತಿಹಾಸಿಕ ಗುಮ್ಮಟ ದುರ್ಗ ಪ್ರದೇಶವನ್ನು ಕಿಮ್ಮಿಂದ ಅಭಿವೃದ್ಧಿ ಪ್ರಾಧಿಕಾರ ಪ್ರದೇಶವೆಂದು ಘೋಷಣೆ ಮಾಡಿ ಅದನ್ನು ಅಭಿವೃದ್ಧಿ ಪಡಿಸಬೇಕು. ರಾಯಚೂರು ವಿಶ್ವವಿದ್ಯಾಲಯಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ಹಾಗೂ ರಾಜ್ಯದ ಯವುದಾದರೂ ಒಂದು ವಿಮಾನ ನಿಲ್ದಾಣಕ್ಕೆ ವೀರ ಮದಕರಿನಾಯಕರ ಹೆಸರನ್ನು ನಾಮಕರಣ ಮಾಡಬೇಕು. ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಬ್ಯಾಕ್‍ಲಾಗ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭೀಮರಾಯ ಜಿಗಜಿಣಗಿ, ರವಿ ನಾಯ್ಕೋಡಿ, ಈರಪ್ಪ ಯಡಹಳ್ಳಿ, ಲಕ್ಷ್ಮಣ ಕೊಳೂರಗಿ, ಪ್ರಶಾಂತ ದಳವಾಯಿ ಶರಣಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.