ಅನ್ ಲಾಕ್ ಗೆ 3 ಮಾರ್ಗಸೂಚಿ ಪ್ರಕಟ

ನವದೆಹಲಿ, ಜೂ.1- ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ.ಈ ಹಿನ್ನೆಲೆಯಲ್ಲಿ ಶೇ. 5 ಕ್ಕಿಂತ ಕಡಿಮೆ ಸೋಂಕು ಪ್ರಕರಣಗಳು ಇರುವ ಜಿಲ್ಲೆಯಲ್ಲಿ ಅನ್ ಲಾಕ್ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗ ಸೂಚಿಯ ಪ್ರಕಾರ ಕಳೆದ ಎರಡು ವಾರದಿಂದ ಶೇ. 5 ರಷ್ಟು ಸೋಂಕು ಕಡಿಮೆ ದಾಖಲಾಗುತ್ತಿರಬೇಕು .ಅಂತಹ ಜಿಲ್ಲೆಗಳಲ್ಲಿ‌‌ ಸೀಮಿತ ಚಟುವಟಿಕೆಗೆ ಅವಕಾಶ ಮಾಡಿಕೊಡುವ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ 3 ಪ್ರಮುಖ ವಿಷಯಗಳನ್ನು ಆಧಾರವಾಗಿಟ್ಟುಕೊಂಡು ಜಿಲ್ಲಾವಾರು ಅನ್ ಲಾಕ್ ಮಾಡುವ ಅಧಿಕಾರ ನೀಡಿದೆ.

45 ಮತ್ತು 60 ವರ್ಷ ದಾಟಿದ ಶೇ.70 ರಷ್ಟು ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ‌ ಲಸಿಕೆ ತೆಗೆದುಕೊಳ್ಳಬೇಕು ಎನ್ನುವ ನಿರ್ಬಂಧ ಹಾಕಿರುವ ಕೇಂದ್ರ ಆರೋಗ್ಯ ಸಚಿವಾಲಯ, ಕಡ್ಡಾಯವಾಗಿ ಕೋವಿಡ್ ಸೂಕ್ತ ವರ್ತನೆ ನಿಯಮ ಪಾಲಿಸುವಂತೆ ನಿರ್ದೇಶನ ನೀಡಿದೆ.

ಜಿಲ್ಲೆಗಳಲ್ಲಿ ಕಡಿಮೆ ಸೋಂಕಿನ ಪ್ರಕಣಗಳು ಕಳೆದ ಎರಡು ಮೂರು ವಾರಗಳಿಂದ ದಾಖಲಾಗುತ್ತಿರುವುದು ಪರಿಗಣಿಸಿ ಅಂತಹ ಜಿಲ್ಲೆಗಳ ಸೋಂಕು ಸಂಖ್ಯೆ ಇಳಿಕೆಯಾಗುತ್ತಿದೆ ಎನ್ನುವುದನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ. ಆದರೆ ಎಲ್ಲ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂಬ ನಿರ್ದೇಶನವನ್ನು ನೀಡಿದೆ

ಉತ್ತರ ಪ್ರದೇಶದಲ್ಲಿ ಅನ್‌ಲಾಕ್:

ಉತ್ತರ ಪ್ರದೇಶದಲ್ಲಿ ಈಗಾಗಲೇ ನೆನ್ನೆಯಿಂದ ಹಲವು ಜಿ್ಳಲ್ಲೆಗಳಲ್ಲಿ ಅನ್ ಲಾಕ್ ಜಾರಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಆರು ನೂರಕ್ಕೂ ಕಡಿಮೆ ಪ್ರಕರಣ ದಾಖಲಾಗುತ್ತಿರುವ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಬಿಹಾರದಲ್ಲಿ ಅನುಮತಿ:

ಬಿಹಾರದಲ್ಲೂ ಕೂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರ ಕೈಗಾರಿಕೆ ಚಟುವಟಿಕೆಗಳಿಗೆ ಮಾಡಿಕೊಟ್ಟಿದ್ದಾರೆ.ಇದರ ಜೊತೆಗೆ ಕರೊನಾ ಕರ್ಪ್ಯೂ ಸಡಿಲ‌ ಮಾಡಲಾಗಿದೆ .

ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2ಗಂಟೆ ತನಕ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟು ನಿತೀಶ್ ಕುಮಾರ್ ಆದೇಶಿಸಿದ್ದಾರೆ.

ಅನ್ ಲಾಕ್

ಛತ್ತೀಸ್ ಗಡ ಮತ್ತು ರಾಜಸ್ತಾನದಲ್ಲಿ ನಾಳೆಯಿಂದ ಸೀಮಿತ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.ಹಂತ ಹಂತವಾಗಿ ಅನ್ ಲಾಕ್ ಪ್ರಕಟಿಸಲಾಗಿದೆ.