ಅನ್ ಲಾಕ್ ರಾಘವ ಅಶ್ವಿನಿ ಶುಭ ಹಾರೈಕೆ

ರಾಮ ರಾಮ ರೇ ನಿರ್ದೇಶಕ ಡಿ.ಸತ್ಯಪ್ರಕಾಶ್ ಹೊಸ ಚಿತ್ರ “’ಅನ್ ಲಾಕ್ ರಾಘವ” ಚಿತ್ರದ ಶೀರ್ಷಿಕೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ

ಸತ್ಯ ಮತ್ತು ಮಯೂರ ಪಿಕ್ಚರ್ಸ್ ನಿರ್ಮಾಣವಾಗುತ್ತಿರುವ `ಅನ್ ಲಾಕ್ ರಾಘವ’ ಚಿತ್ರದಲ್ಲಿ ಮಿಲಿಂದ್ ಮತ್ತು ರಚೆಲ್ ಡೇವಿಡ್ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ದೀಪಕ್ ಮಧುವನಹಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ.

ಈ ಮಾಹಿತಿ ಹಂಚಿಕೊಂಡ ನಿರ್ಮಾಪಕ ಸತ್ಯಪ್ರಕಾಶ್ ಚಿತ್ರರಂಗಕ್ಕೆ ತಂಡಕಟ್ಟಬೇಕು ಎನ್ನುವ ಆಸೆ ಇತ್ತು. ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ಹೊಸತನದ ನಿರೂಪಣೆ ಇದೆ. ಜೊತೆಗೆ ಕಮರ್ಷಿಯಲ್ ಚಿತ್ರ. ರೋಮ್ಯಾಂಟಿಕ್ ಕಾಮಿಡಿ ಜರ್ನಿ ಕೂಡ ಇರುತ್ತದೆ. ಮೂರು ರೀತಿ ಕಾಮಿಡಿ ಇರುತ್ತದೆ. ಪಾತ್ರ ಏನು ಮಾತಾಡ್ತಾರೆ ಅಂತಾ ಗೊತ್ತಾಗಲ್ಲ. ಆದ್ರೆ ಪ್ರೇಕ್ಷಕ ನಗ್ತಾರೆ. ಅನೂಪ್ ಸೀಳಿನ್  ಅದ್ಭುತ ಸಂಗೀತ ನೀಡಿದ್ದಾರೆ ಎಂದಿದ್ದಾರೆ.

ತಿಂಗಳಾಂತ್ಯಕ್ಕೆ ಚಿತ್ರೀಕರಣ ಆರಂಭಿಸುವ ಉದ್ದೇಶ ಹೊಂದಿದ್ದು ಚಿತ್ರದುರ್ಗ,ಬೆಂಗಳೂರು ಮಂಗಳೂರಿನಲ್ಲಿ ಚಿತ್ರೀಕರಣ ನೆಡೆಸಿ ವರ್ಷಾಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಉದ್ದೇಶವಿದೆ ಎನ್ನುವ ವಿವರಣೆ ಅವರದು. ದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ಡಿ ಸತ್ಯಪ್ರಕಾಶ್ ಕತೆ-ಚಿತ್ರಕತೆ-ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಚಿತ್ರದಲ್ಲಿ ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮತ್ತಿತರಿದ್ದಾರೆ. ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನವಿದೆ.