ಅಪಘಾತದಲ್ಲಿ ಗಾಯಗೊಂಡ ಬಾಲಕಿ : ಆಸ್ಪತ್ರೆಗೆ ದಾಖಲಿಸಿ ಮಾನವಿಯತೆ ಮೆರೆದ ಗೃಹ ಸಚಿವ.


ಶಿವಮೊಗ್ಗ, ಜ. 15: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕಿಗೆ, ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ.ಶುಕ್ರವಾರ ಸಂಜೆ ಭದ್ರಾವತಿ ತಾಲೂಕು ಬಿ.ಆರ್.ಪಿ. ಬಳಿ, ಆಕಳಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಅದರಲ್ಲಿ ತೆರಳುತ್ತಿದ್ದ ಮುತ್ತಿನಕೊಪ್ಪ ಗ್ರಾಮದ ದಂಪತಿ ಹಾಗೂ ಬಾಲಕಿ ಕೆಳಕ್ಕೆ ಬಿದ್ದಿದ್ದರು. ಬಾಲಕಿಗೆ ಗಾಯವಾಗಿತ್ತು. ಅದೇ ವೇಳೆ ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಗೃಹ ಸಚಿವರು, ತಕ್ಷಣವೇ ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಬಿ.ಆರ್.ಪಿ. ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.