ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ಶಾಸಕರ ಕಾರ್ಯಮೆಚ್ಚುಗೆ

ಕುಣಿಗಲ್, ಸೆ. ೧೨- ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಕರೆತಂದು ಸ್ವತಃ ಪ್ರಾಥಮಿಕ ಚಿಕಿತ್ಸೆ ನೀಡುವ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರು ಮಾನವೀಯತೆ ಮೆರೆದಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ರಾತ್ರಿ ಕುಣಿಗಲ್? ತಾಲ್ಲೂಕು ಹುತ್ರಿದುರ್ಗ ಹೋಬಳಿಯ ಕಲ್ಲನಾಯಕನಹಳ್ಳಿಯ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿದೆ.
ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ ರಸ್ತೆಯಲ್ಲೇ ಶಾಸಕರು ವಾಪಸ್ಸಾಗುತ್ತಿದ್ದರು. ಮಾರ್ಗಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ಕಂಡ ಶಾಸಕರು, ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆ ತರಲು ತಕ್ಷಣ ವ್ಯವಸ್ಥೆ ಮಾಡಿದರು. ಅಲ್ಲದೆ, ಆಸ್ಪತ್ರೆಗೆ ತೆರಳಿ ತಾವೇ ಖುದ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದರು.
ಮೂಲತಃ ವೈದ್ಯರಾದ ಡಾ.ರಂಗನಾಥ್? ಶಾಸಕರಾದ ಬಳಿಕವೂ ಕ್ಷೇತ್ರದ ಹಲವರಿಗೆ ಚಿಕಿತ್ಸೆ ನೀಡುತ್ತಾ ಗಮನ ಸೆಳೆದಿದ್ದಾರೆ. ಕೊರೊನಾ ಸಂಕಷ್ಟ ಕಾಲದಲ್ಲೂ ಚಿಕಿತ್ಸೆ ನೀಡಿ ಡಾಕ್ಟರ್? ರಂಗಣ್ಣ ಎಂದೇ ಜನಮಾನಸದಲ್ಲಿ ಉಳಿದಿದ್ದಾರೆ.