ಅಪಘಾತದ ಸುದ್ದಿ ಕೇಳಿ ದುಃಖವಾಗುತ್ತಿದೆ: ಡಾ ಶೈಲೇಂದ್ರ ಬೆಲ್ದಾಳೆ

ಚಿಟಗುಪ್ಪ:ನ.6: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಉಡಮನಳ್ಳಿಗೆ ಹೋಗುತ್ತಿದ್ದ ಆಟೋ ಮತ್ತು ಐಶರ್ ಟ್ರಕ್ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ 7 ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಡಾ ಶೈಲೇಂದ್ರ ಬೆಲ್ದಾಳೆ ರವರು ದುಃಖ ವ್ಯಕ್ತಪಡಿಸಿದ್ದಾರೆ.
ಬೇಮಳಖೇಡದ ಬಳಿ ಐಶರ್ ಟ್ರಕ್ ಮತ್ತು ಆಟೋ ನಡುವೆ ಶುಕ್ರವಾರ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಗಳಲ್ಲಿ ಪೆÇೀಸ್ಟ್ ಮಾಡಿರುವ ಅವರು,
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಈ ಘಟನೆ ಕುರಿತು ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ.
ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದೇನೆ’ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.