ಅಪಘಾತವಾಗಿ ಬಿದ್ದ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸಿದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಸೇಡಂ,ಮಾ,18: ನಿನ್ನೆ ರಾತ್ರಿ ಕಾರ್ಯಕ್ರಮ ಮುಗಿಸಿಕೊಂಡು ಕಲಬುರ್ಗಿ ತಮ್ಮ ನಿವಾಸದ ಕಡೆ
ತೆರಳುವಾಗ ಸೇಡಂ ಕಲಬುರ್ಗಿ ರಸ್ತೆಯಲ್ಲಿ ಅಪಘಾತವಾಗಿ ಬಲವಾದ ಪೆಟ್ಟು ಬಿದ್ದ ದ್ವಿಚಕ್ರ ವಾಹನ ಸವಾರನಿಗೆ ಸ್ವಂತ ಕಾರಿನಲ್ಲಿ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿಗೆ ಕಳುಹಿಸಿಕೊಟ್ಟ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.