ಅಪಘಾತ: ಬಿಜೆಪಿ ಮುಖಂಡ ಪ್ರಾಣಾಪಾಯದಿಂದ ಪಾರು

ವಿಜಯಪುರ,ನ.9-ಅಪಘಾತದಲ್ಲಿ ಬಿಜೆಪಿ ಮುಖಂಡರೊಬ್ಬರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ.
ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಎಂಬುವವರೆ ಅಪಘಾತದಲ್ಲಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬಳಿ ಎದುರಿನಿಂದ ಬಂದ ಕಾರು ಇವರ ಕಾರಿಗೆ ಡಿಕ್ಕಿ ಹೊಡೆದಿದ್ದು, ಎರಡೂ ಕಾರುಗಳು ಜಖಂಗೊಂಡಿವೆ. ವಿಜುಗೌಡ ಪಾಟೀಲ ಅವರ ಎದೆಗೆ ಪೆಟ್ಟಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.