`ಅಪರೂಪ’ ಬಿಡುಗಡೆಗೆ ಸಜ್ಜು

ನಿರ್ದೇಶಕ ಮಹೇಶ್ ಬಾಬು ಅವರ ನಿರ್ದೇಶನ ಚಿತ್ರ ಹಲವು ವರ್ಷಗಳ ತೆರೆಗೆ ಬರಲು ಸಜ್ಜಾಗಿದೆ. ಅದುವೇ “ಅಪರೂಪ”. ಅರಸು, ಆಕಾಶ್, ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಸಾರಥ್ಯದ ಅಪರೂಪ ಮುಂದಿನವಾರ ತೆರೆಗೆ ಬರುತ್ತಿದೆ.

ಅಪರೂಪ ಸಿನಿಮಾ ಮೂಲಕ ಸುಘೋಷ್ ಮತ್ತು ಹೃತಿಕಾ ಕನ್ನಡ ಸಿನಿಮಾ ಲೋಕಕ್ಕೆ ನಾಯಕ ಹಾಗೂ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕ ನಾಯಕಿಯ ನಡುವೆ ಬರುವ ಅಹಂ ಏನೆಲ್ಲಾ ಸಮಸ್ಯೆ ಉಂಟು ಮಾಡುತ್ತದೆ ಎನ್ನುವುದನ್ನು ಚಿತ್ರದ ಮೂಲಕ ತೋರಿಸಿದ್ದಾರೆ ನಿರ್ದೇಶಕ ಮಹೇಶ್ ಬಾಬು.

ಮಹೇಶ್ ಬಾಬು ನಿರ್ದೇಶನದ ಅತಿರಥ ಸಿನಿಮಾದಲ್ಲಿ ನಟಿಸಿದ್ದ ಸುಘೋಷ್ ಚಿತ್ರದಲ್ಲಿಯೂ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಹೃತಿಕಾ ತೆಲುಗಿನ ಖ್ಯಾತ ನಟಿ ಅಮನಿ  ಸಹೋದರನ ಪುತ್ರಿ. ವಿಷ್ಣುವರ್ಧನ್ ನಟನೆಯ ಅಪ್ಪಾಜಿ ಚಿತ್ರದಲ್ಲಿ ಅಮನಿ ನಾಯಕಿಯಾಗಿ ಬಣ್ಣ ಹಚ್ಚಿದ್ದರು.

ಅಶೋಕ್ , ಅರುಣಾ ಬಲರಾಜ್, ಅವಿನಾಶ್, ಕುರಿಪ್ರತಾಪ್ , ದಿನೇಶ್ ಮಂಗಳೂರು, ವಿಜಯ್ ಚೆಂಡೂರು,  ಕಡ್ಡಿಪುಡಿ ಚಂದ್ರು, ಮೋಹನ್ ಜುನೇಜಾ ಅಪರೂಪ ಸಿನಿಮಾದ ಭಾಗವಾಗಿದ್ದಾರೆ.

ಪ್ರಜ್ವಲ್ ಪೈ ಸಂಗೀತಇದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡಿಗೆ ಧ್ವನಿಯಾಗಿರುವುದು ವಿಶೇಷ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಕಾಶ್ಮೀರದಲ್ಲಿ ಶೂಟಿಂಗ್ ನಡೆಸಲಾಗಿದ್ದು, ಸೂರ್ಯಕಾಂತ್ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಸುಗ್ಗಿ ಸಿನಿಮಾಸ್ ಬ್ಯಾನರ್ ನಡಿ ತಯಾರಾಗಿರುವ ಅಪರೂಪ ಸಿನಿಮಾ ತೆರೆಗೆ ಬರುತ್ತಿದೆ.