ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೮; ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ  ಅಧಿಕಾರ ವಹಿಸಿಕೊಂಡರು.ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಬಿ.ಟಿ.ಕುಮಾರಸ್ವಾಮಿ ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.ಬಿ.ಟಿ.ಕುಮಾರ ಸ್ವಾಮಿ ಅವರು ಈ ಹಿಂದೆ ಚಿತ್ರದುರ್ಗ ತಹಶೀಲ್ದಾರ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಡಳಿತಾಧಿಕಾರಿ ಸೇರಿದಂತೆ ವಿವಿಧೆಡೆ  ಕಾರ್ಯನಿರ್ವಹಿಸಿದ್ದಾರೆ. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.