ಅಪಾಯಕಾರಿ ವ್ಹೀಲಿಂಗ್ ಪಿಎಸ್‌ಐ ಪುತ್ರ ಸೆರೆ

ಮೈಸೂರು,ಆ.೨೬-ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪುತ್ರನೊಬ್ಬ ನಗರ ಪೊಲೀಸರ ಅತಿಥಿಯಾಗಿದ್ದಾನೆ.
ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದ ಸೆಯ್ಯದ್ ಐಮಾನ್ ಬಂಧಿತ ಆರೋಪಿಯಾಗಿದ್ದಾನೆ.ಸಿದ್ಧಾರ್ಥ ಸಂಚಾರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಬೈಕ್‌ನ್ನು ಜಪ್ತಿ ಮಾಡಲಾಗಿದೆ.ಯುವಕ ನಗರದ ರಿಂಗ್ ರಸ್ತೆ ಹಾಗೂ ರಾಜೀವ್ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ಬಳಿಕ ಇದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ.
ಇದೇ ವೀಡಿಯೋಗಳನ್ನು ಆಧರಿಸಿ ಪೊಲೀಸರು ಯುವಕನನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.