ಅಪ್ಪಾಜಿಗೌಡ, ಹಾಲಪ್ಪ ಬಿಜೆಪಿಗೆ ಸೇರ್ಪಡೆ

ಬೆಂಗಳೂರು,ಏ.೪:ಕಾಂಗ್ರೆಸ್‌ನ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ. ಅಪ್ಪಾಜಿಗೌಡ ಸೇರಿದಂತೆ ಹಲವು ಮುಖಂಡರು ಇಂದು ಬಿಜೆಪಿ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ. ಅಪ್ಪಾಜಿಗೌಡ, ಅಗರಿಬೊಮ್ಮನಹಳ್ಳಿ ಕಾಂಗ್ರೆಸ್ ಮುಖಂಡ ಕೃಷ್ಣನಾಯಕ್, ಬ್ಲಾಕ್ ಅಧ್ಯಕ್ಷ ಪರಮೇಶ್ವರಪ್ಪ,
ವಾಲ್ಮೀಕಿ ಸಮುದಾಯದ ಮುಖಂಡ ಕೋಟ್ಟೆಪ್ಪ ಸೇರಿದಂತೆ ಹಲವರು ಬಿಜೆಪಿ ಸೇರಿದ್ದು, ಇವರುಗಳನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲು, ಸಚಿವ ಬಿ. ಶ್ರೀರಾಮುಲು, ಬಳ್ಳಾರಿ ಸಂಸದ ದೇವೇಂದ್ರಪ್ಪ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ಸೇರಿರುವ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ. ಅಪ್ಪಾಜಿಗೌಡ ಅವರು ಈ ಚುನಾವಣೆಯಲ್ಲಿ ಕನಕಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎದುರು ಕಣಕ್ಕಿಳಿಯಲಿದ್ದಾರೆ.
ಇಂದು ಬಿಜೆಪಿ ಸೇರಿದ ನಂದಿಹಳ್ಳಿ ಹಾಲಪ್ಪ, ಈ ಹಿಂದೆ ಹೂವಿನಹಡಗಲಿ ಕ್ಷೇತ್ರದಿಂದ ಮಾಜಿ ಸಚಿವ ಎಂ.ಪಿ ಪ್ರಕಾಶ್‌ರವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.