ಅಪ್ಪ- ಮಗನ ಬಾಂಧವ್ಯದ `ಫಾದರ್’  ಸೆಟ್ಟೇರಲು ಸಜ್ಜು

ಆರ್.ಸಿ. ಸ್ಟುಡಿಯೋಸ್‌.ಆರ್‌ ಚಂದ್ರು  ಬಹುದೊಡ್ಡ ಕನಸು. ಪ್ಯಾನ್‌ ಇಂಡಿಯಾ ಬ್ಯಾನರ್.‌ ಕನ್ನಡಕ್ಕೆ ಸೀಮಿತವಾಗಿದ್ದ ಶ್ರೀ ಸಿದ್ದೇಶ್ವರ ಮೂವೀಸ್‌ ಬ್ಯಾನರ್‌ ಅನ್ನು ಸೇರಿಸಿಕೊಂಡೇ ಆರ್.ಸಿ. ಸ್ಟುಡಿಯೋಸ್‌ ಹುಟ್ಟು ಕಂಡಿದೆ.

ಈವರೆಗೆ ಸ್ಟಾರ್‌ ನಟರ ಐದು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಆರ್.ಚಂದ್ರು, ಈಗ ಆರ್.ಸಿ. ಸ್ಟುಡಿಯೋಸ್‌ ಸಂಸ್ಥೆ ಮೂಲಕ ಒಟ್ಟಾರೆ ಆರು ಪ್ಯಾನ್‌ ಇಂಡಿಯಾ ಸಿನಿಮಾ ಪ್ರಕಟಿಸಿದ್ದು ಅವೆಲ್ಲವೂ ಬಿಗ್‌ ಬಜೆಟ್‌  ಚಿತ್ರಗಳು ಎನ್ನುವುಸು ಹೆಗ್ಗಳಿಕೆ.

ಅದರಲ್ಲಿ  “ಫಾದರ್‌”  ಚಿತ್ರ  ಇದೇ ಶನಿವಾರ ಅದ್ದೂರಿ ಮುಹೂರ್ತ ನೆರವೇರುತ್ತಿದೆ. ಡಾರ್ಲಿಂಗ್‌ ಕೃಷ್ಣ ಮತ್ತು ಪಂಚಭಾಷೆ ನಟ ಪ್ರಕಾಶ್  ರೈ ಚಿತ್ರದ ಮುಖ್ಯ ಆಕರ್ಷಣೆ.

ಇದೊಂದು ಅಪ್ಪನ ಮಗನ ಬಾಂಧವ್ಯ ಕುರಿತಕಥಾಹಂದರ ಹೊಂದಿರುವ ಸಿನಿಮಾ. ಅಪ್ಪನ ಮೌಲ್ಯ ಸಾರಿದ್ದ ಆರ್.‌ ಚಂದ್ರು ಮೊದಲ ಸೂಪರ್‌ ಹಿಟ್‌ ಸಿನಿಮಾ ತಾಜ್‌ ಮಹಲ್‌ ಇಂದಿಗೂ ಕಾಡುತ್ತೆ.

“ಫಾದರ್‌”  ಕೂಡ ಅಂಥದ್ದೇ ಕಂಟೆಂಟ್‌ ಹೊಂದಿರುವ ಸಿನಿಮಾ ಅನ್ನೋ ಫೀಲ್‌ ಹೆಸರಲ್ಲೇ ಇದೆ. ಮೊದಲಿಂದಲೂ ಆರ್. ಚಂದ್ರು ಕಂಟೆಂಟ್‌ಗೆ ಒತ್ತು ಕೊಟ್ಟವರು. ಈ ಫಾದರ್‌ ಕೂಡ ಅದಕ್ಕೆ ಹೊರತಾಗಿರಲ್ಲ ಎಂಬ ಭಾವನೆ ನಮ್ಮದು. ಸದ್ಯಕ್ಕೆ ಫಾದರ್‌ ಏಪ್ರಿಲ್‌ 27 ರಂದು ಸೆಟ್ಟೇರುತ್ತಿದೆ. ಅಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ಸಿಗಲಿದೆ ಎಂದು ಆರ್ ಚಂದ್ರು ಹೇಳಿದ್ದಾರೆ.

 ಆರ್.ಸಿ. ಸ್ಟುಡಿಯೋಸ್‌ ಮೂಲಕ ತಯಾರಾಗುತ್ತಿರುವ ಫಾದರ್‌ ಎಂಬ ಪ್ಯಾನ್‌ ಇಂಡಿಯಾ ಸಿನಿಮಾಗೆ ಎಂದಿನಂತೆ ನಿಮ್ಮ ಪ್ರೀತಿ ಹಾಗು ಬೆಂಬಲ ಇರಲಿ ಒಳ್ಳೆಯ ಸಿನಿಮಾ ನೀಡುವುದು ನಮ್ಮ ಉದ್ದೇಶ ಎಂದಿದ್ದಾರೆ. ನಿರ್ದೇಶಕ ರಾಜ ಮೋಹನ್‌ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಫಾದರ್‌ ಎಂಬ ಬಿಗಿದಪ್ಪುವ ಚಿತ್ರ

“ಫಾದರ್‌”  ಸಿನಿಮಾ ಕೂಡ ಎದೆ ಭಾರವೆನಿಸುವ ಚಿತ್ರ. ಮನಸ್ಸಿಗೆ ಖುಷಿ ಕೊಡುವ, ಕಣ್ಣಲ್ಲಿ ಆನಂದಭಾಷ್ಪ ತರುವ ಮತ್ತೆ ಮತ್ತೆ ಕಾಡುವ, ಏನೋ ಕಳೆದುಕೊಂಡ ಸಂಕಟ, ಇನ್ನೇನ್ನನ್ನೋ ಪಡೆಯಬೇಕೆಂಬ ಹಂಬಲ, ಮತ್ತೇನೋ ಉಳಿಸಿಕೊಳ್ಳಬೇಕೆಂಬ ಹಠ ಇವೆಲ್ಲದರ ಸಮ್ಮಿಶ್ರಣವೇ ಫಾದರ್.‌

ಚಿತ್ರದಲ್ಲಿ  ನೋವಿದೆ, ನಲವಿದೆ. ಬಾಂಧವ್ಯದ ಹೂರಣವಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಸ್ತವದ ತಿರುಳಿದೆ. ಪ್ರತಿಯೊಬ್ಬರ ಮನಸ್ಸಿಗೂ ನಾಟುವ ಅಂಶವಿದೆ. ಕಣ್ಣಿಗೆ ಕಟ್ಟುವ ಚಿತ್ರಣವೂ ಇರಲಿದೆ. ಫಾದರ್‌ ಪ್ರತಿಯೊಬ್ಬರ ಮನಸ್ಸನ್ನು ಹಗುರಾಗಿಸೋ ಚಿತ್ರ ಎನ್ನುವ ಹೆಗ್ಗಳಿಕೆ ಪಡೆದಿದೆ

.