
ಕಲಬುರಗಿ,ಜು 19: ಅಳಂದ ತಾಲೂಕಿನ 11 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಕುರಿತು ಸೂಕ್ತ ತನಿಖೆ ನಡೆಸಿ ಅಪರಾಧಿಗಳಿಗೆ ಉಗ್ರ ಶಿಕ್ಷೆ ನೀಡುವಂತೆ ಎಐಡಿಎಸ್‍ಒ ಜಿಲ್ಲಾ ಸಮಿತಿ ಆಗ್ರಹಿಸಿದೆ. ಕಳೆದ ವರ್ಷವೇ ಇದೇ ತಾಲೂಕಿನ ಗ್ರಾಮ ಒಂದರ ಗದ್ದೆಯಲ್ಲಿ ಅತ್ಯಾಚಾರ ಮಾಡಿ ಕೊಲೆಗೈದ ಘಟನೆ ಮಾಸಿಹೋಗುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿರೋದು ಅತ್ಯಂತ ಅಘಾತಕಾರಿ. ಇತಂಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಸರ್ಕಾರ ಈ ಕೂಡಲೇ ಇಂಟರ್ನೆಟ್ ವೆಬ್ ಸೈಟ್ ನಲ್ಲಿ ಹರಿಬಿಡುವ ಅಶ್ಲೀಲ ಸಿನಿಮಾ, ಸಾಹಿತ್ಯಗಳನ್ನು ನಿಲ್ಲಿಸಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಸಮಿತಿ ಕಾರ್ಯದರ್ಶಿ ತುಳಜರಾಮ ಎನ್ ಕೆ ತಿಳಿಸಿದ್ದಾರೆ.