ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿ ಬಂಧನ

ನವದೆಹಲಿ,ಫೆ.೨೯-ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಸಾಮಾಜಿಕ ಜಾಲತಾಣ ಸ್ನೇಹಿತ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆಯ ನಂತರ, ಇ-ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿ, ದೆಹಲಿಯ ಸಾಗರ್‌ಪುರ ಪ್ರದೇಶದ ದಾಬ್ರಿ ಮೆಟ್ರೋ ನಿಲ್ದಾಣದ ಬಳಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಆಕೆಯ ಖಾಸಗಿ ಅಂಗಗಳಿಂದ ರಕ್ತ ಸೋರುತ್ತಿದ್ದು ಎನ್ನಲಾಗಿದೆ.ದಾರಿಹೋಕರು ಈ ವಿಷಯ ಪೊಲೀಸರಿಗೆ ತಿಳಿಸಿದ್ದಾರೆ .ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬಳಿಕ ಆಕೆಯ ಹೇಳಿಕೆಯನ್ನು ಪಡೆದುಕೊಂಡಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ಕೋಚಿಂಗ್ ತರಗತಿಗೆ ಹೋಗಿದ್ದಳು, ನಂತರ ಅವಳು ಸ್ನೇಹಿತನನ್ನು ಭೇಟಿಯಾಗಲು ತೆರಳಿದ್ದಾಳೆ ಎನ್ನಲಾಗಿದೆ.
ಬಾಲಕಿ ಸರ್ಕಾರಿ ಶಾಲೆಯಲ್ಲಿ ೧೧ನೇ ತರಗತಿ ಓದುತ್ತಿದ್ದಾಳೆ. ಕೆಲವು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಆರೋಪಿ ಹುಡುಗನೊಂದಿಗೆ ಸ್ನೇಹ ಬೆಳೆಸಿದ್ದಳು ಎಂದು ತಿಳಿದು ಬಂದಿದೆ.ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಆಕೆ ತನ್ನ ಸಾಮಾಜಿಕ ಮಾಧ್ಯಮ ಸ್ನೇಹಿತನನ್ನು ಭೇಟಿಯಾಗಲು ಹೋದಾಗ ಅಲ್ಲಿ ಅತ್ಯಾಚಾರ ನಡೆದಿದೆ ಎಂದು
ನಮಗೆ ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ. ಘಟನೆಯಲ್ಲಿ ಬೇರೆಯವರ ಕೈವಾಡವಿದೆಯೇ ಎಂದು ಪತ್ತೆ ಹಚ್ಚುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ.