ಅಪ್ರಾಪ್ತೆ ಮೇಲೆ ಅತ್ಯಾಚಾರ ಆನ್ ಲೈನ್ನಲ್ಲಿ ಹರಿಬಿಟ್ಟ ಕಾಮುಕರು

ನವದೆಹಲಿ,ಜ.೧೩-ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಆಕೆಯ ಸ್ನೇಹಿತ ಮತ್ತು ಆತನ ಗೆಳೆಯರು ಸಾಮೂಹಿಕ ಅತ್ಯಾಚಾರವೆಸಗಿ, ಹೀನ ಕೃತ್ಯದ ದೃಶ್ಯಗಳನ್ನು ಚಿತ್ರೀಕರಿಸಿರುವ ಅಮಾನವೀಯ ಘಟನೆ ನಡೆದಿದೆ.
ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಗೆಳೆಯ ಕಳೆದ ಒಂದು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಬಾಲಕಿಯೊಂದಿಗೆ ನಡೆಸಿದ ಕಾಮಚೇಷ್ಟೆಗಳ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದ ಆರೋಪಿಗಳು ಕಳೆದ ಜ.೧ರಂದು ಅವುಗಳನ್ನು ಆನ್ ಲೈನ್ ನಲ್ಲಿ ಹರಿಯಬಿಟ್ಟಿದ್ದಾರೆ.
ಈ ಚಿತ್ರಗಳನ್ನು ತೋರಿಸಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ್ದ ಆರೋಪಿ, ತನ್ನ ಸ್ನೇಹಿತರೂ ಅತ್ಯಾಚಾರವೆಸಗುವಂತೆ ಮಾಡಿದ್ದು ವಿಡಿಯೋ ವೈರಲ್ ಆದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಳಿಕ ಸಂತ್ರಸ್ತೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಳು.ಬಾಲಕಿಯ ಸ್ನೇಹಿತ ಮತ್ತು ಇತರ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಆರೋಪಿಗಳು ಮತ್ತು ವಿಡಿಯೋ ವೈರಲ್ ಮಾಡಿದವರನ್ನು ಪತ್ತೆ ಹೆಚ್ಚಲು ಕ್ರಮಕೈಗೊಳ್ಳಲಾಗಿದೆ ಎಂದು ಬರೇಲ್ವಿ ಎಎಸ್ ಪಿ ಸತ್ಯನಾರಾಯಣ ಪ್ರಜಾಪತ್ ತಿಳಿಸಿದ್ದಾರೆ.