ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ: ಬಂಧನ

ಮೈಸೂರು: ನ.28:- ಸಾಂಸ್ಕೃತಿಕ ನಗರಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ನಡೆದಿದೆ. ಸ್ವಂತ ತಂಗಿಯ ಮೇಲೇ ಅತ್ಯಾಚಾರವೆಸಗಿದ ಪಾಪಿ ಅಣ್ಣ ಪೆÇಲೀಸರ ಅತಿಥಿಯಾಗಿದ್ದಾನೆ. ಮೈಸೂರಿನ ಗಿರಿದರ್ಶಿನಿ ನಗರದಲ್ಲಿ ಅಮಾನುಷ ಘಟನೆ ನಡೆದಿದೆ. ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿದ ವಿನಯ್ ಕುಮಾರ್ ಕಂಬಿ ಎಣಿಸಲು ಹೋಗಿದ್ದಾನೆ.
ಚಿಕ್ಕವಯಸ್ಸಿನಲ್ಲೇ ತಂದೆ ತಾಯಿಯನ್ನ ಕಳೆದುಕೊಂಡಿದ್ದ 16 ವರ್ಷದ ಅಪ್ರಾಪ್ತೆ ಅಣ್ಣನ ಆಶ್ರಯ ಪಡೆದಿದ್ದಳು.ಇಬ್ಬರು ಅಣ್ಣಂದಿರು ಹಾಗೂ ಇಬ್ಬರು ಅಕ್ಕಂದಿರೊಂದಿಗೆ ಬೆಳೆದ ಅಪ್ರಾಪ್ತೆ ಕಾಮುಕ ಅಣ್ಣನ ಕಾಮಪಿಪಾಶೆಗೆ ಬಲಿಯಾಗಿದ್ದಾಳೆ.
ಅಕ್ಕಂದಿರಿಗೆ ವಿವಾಹವಾದ ಕಾರಣ ಇಬ್ಬರು ಅಣ್ಣಂದಿರ ಜೊತೆ ಆಶ್ರಯ ಪಡೆದಿದ್ದಳು.ಕುಡಿತದ ಚಟಕ್ಕೆ ಬಲಿಯಾಗಿದ್ದ ಓರ್ವ ಅಣ್ಣ ವಿನಯ್ ಕುಮಾರ್ ಪಾನಮತ್ತನಾದ ಸಮಯದಲ್ಲಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಕಳೆದ ಮೂರು ತಿಂಗಳಿಂದ ಅತ್ಯಾಚಾರವೆಸಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಕಾಮಪಿಶಾಚಿ ಅಣ್ಣನ ಕೃತ್ಯಕ್ಕೆ ಅಮಾಯಕ ತಂಗಿ ಗರ್ಭಿಣಿಯಾಗಿದ್ದಾಳೆ.
ನಿನ್ನೆ ಘಟನೆ ಬೆಳಕಿಗೆ ಬಂದಿದ್ದು ಆಲನಹಳ್ಳಿ ಪೆÇಲೀಸ್ ಠಾಣೆಯಲ್ಲಿ ಕಾಮುಕ ಅಣ್ಣನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಅಪ್ರಾಪ್ತೆಯನ್ನ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ