ಕಲಬುರಗಿ,ಜು.6-ಹನ್ನೆರಡರಿಂದ ಹದಿನಾಲ್ಕು ವರ್ಷ ವಯಸ್ಸಿನ ಐವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಇಲ್ಲಿನ ಮಹಿಳಾ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ(ಜು.5) ಮಧ್ಯಾಹ್ನ ಐವರು ಬಾಲಕರು ಬಾಲಕಿಯನ್ನ ಮನೆ ಮೇಲಿನ ಮಹಡಿ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಸ್ವಸ್ಥ ಬಾಲಕಿಯನ್ನ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾಲ್ವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೆÇಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನೋರ್ವ ಬಾಲಕ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.