
ಗುಜರಾತ್, ಮಾ.೧೪- ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಬರ್ಬರವಾಗಿ ಕೊಲೆ ಮಾಡಿರುವ ಪೈಶಾಚಿಕ ಗುಜರಾತ್ನ ದಾದ್ರಾ ನಗರ ಹವೇಲಿ ಜಿಲ್ಲೆಯಲ್ಲಿ ನಡೆದಿದೆ.
ವಠಾರದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಪಕ್ಕದ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಅವಿವಾಹಿತ ವ್ಯಕ್ತಿ ತನ್ನ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ಬಾಲಕಿಯನ್ನು ತುಂಡು ತುಂಡಾಗಿ ಕತ್ತರಿಸಿ, ಚೀಲವೊಂದರಲ್ಲಿ ತುಂಬಿ ಶೌಚಾಲಯದ ಪೈಪ್ಲೈನ್ ಬಳಿ ಎಸೆದಿದ್ದಾನೆ ಎನ್ನುವ ಆತಂಕಕಾರಿ ಮಾಹಿತಿ ಸ್ಥಳೀಯ ಜನರನ್ನು ಬೆಚ್ಚಿ ಮಾಡುವಂತೆ ಮಾಡಿದೆ.
ವಿಚಾರ ತಿಳಿಯುತ್ತಿದ್ದಂತೆ ಆಘಾತಗೊಂಡ ಬಾಲಕಿಯ ತಂದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
ಈ ಹಿಂದೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ವಠಾರದ ಸದಸ್ಯರು ಆರೋಪಿಗೆ ಥಳಿಸಿದ್ದರು. ಸದ್ಯ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ.