ಅಪ್ರಾಪ್ರೆಯ ಮೇಲೆ ಅತ್ಯಾಚಾರ ಕಾಮುಕನಿಗೆ 20 ವರ್ಷ ಜೈಲು.

ಬೆಂಗಳೂರು,ಸೆ.19-ಅಪ್ರಾಪ್ರೆಯ ಮೇಲೆ ಅತ್ಯಾಚಾರ ನಡೆಸಿದ್ದ ಅಪರಾಧಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ನಗರದ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿ ತ್ವರಿತಗತಿಯ ನ್ಯಾಯಾಲಯದ ನ್ಯಾಯಾಧೀಶ ಎ.ಜಿ.ಗಂಗಾಧರ್​ ಅವರು ಅಪ್ರಾಪ್ರೆಯ ಮೇಲೆ ಅತ್ಯಾಚಾರ ನಡೆಸಿದ್ದ
ಅಪರಾಧಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಅಲ್ಲದೇ, ದಂಡದ ಮೊತ್ತ ಪಾವತಿಸದಿದ್ದಲ್ಲಿ ಆರು ತಿಂಗಳ ಕಾಲ ಹೆಚ್ಚುವರಿಯಾಗಿ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
:ನಂದಿನಿ ಬಡಾವಣೆಯ ನಂಜುಂಡೇಶ್ವರ ನಗರದ ನಿವಾಸಿ ಆಟೋ ಚಾಲಕ ಸೈಯದ್​ ಖಾಜಾ (28) 17 ವರ್ಷದ ಅಪ್ರಾಪ್ರೆಯನ್ನು 2018ರ ಡಿಸೆಂಬರ್​ 14ರಂದು ಅಪಹರಣ ಮಾಡಿದ್ದರು. ಬಳಿಕ ಕೆಂಗೇರಿ ಬಳಿಯಲ್ಲಿ ಮನೆಯಲ್ಲಿರಿಸಿ ಒತ್ತಾಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅಲ್ಲದೇ, ಆಕೆಯ ವಿರೋಧದ ನಡುವೆ ವಿವಾಹವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಸಂತ್ರಸ್ತೆಯ ಪೋಷಕರು ನಂದಿನಿ ಬಡಾವಣೆಯ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ಕೈಗೊಂಡಿದ್ದ ಇನ್ಸ್​ಪೆಕ್ಟರ್​ ಬಿ.ಎನ್​.ಲೋಹಿತ್, ಸಂತ್ರಸ್ತೆ ಬಾಲಕಿಯನ್ನು ರಕ್ಷಣೆ ಮಾಡಿ ಆರೋಪಿ ವಶಕ್ಕೆ ಪಡೆದಿದ್ದರು. ಅಲ್ಲದೇ, ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.