ಅಫಜಲಪೂರದಲ್ಲಿ ಜಾಗೃತಿ ರಥಕ್ಕೆ ಚಾಲನೆ

ಕಲಬುರಗಿ:ಏ.7:ಅಫಜಲಪೂರ ತಾಲೂಕಾ ಆಡಳಿತ, ತಾಲೂಕಾ ಕಾನೂನು ಸೇವಾ ಸಮಿತಿ, ತಾಲೂಕಾ ನ್ಯಾಯವಾದಿಗಳ ಸಂಘ ಹಾಗೂ ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧ ಜಾಗೃತಿ ರಥಕ್ಕೆ ಗುರುವಾರ ಅಫಜಲಪುರ ತಾಲೂಕು ನ್ಯಾಯಾಲಯ ಆವರಣದಲ್ಲಿ ಬುಧವಾರ ಅಪಜಲಪುರ ತಾಲೂಕಾ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅಶೋಕ.ಟಿ ಅವರು ಚಾಲನೆ ನೀಡಿದರು.

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸದೆ ಅವರನ್ನು ದುಡಿತಕ್ಕೆ ಹಚ್ಚಿದ್ದಲ್ಲಿ ಮಕ್ಕಳನ್ನು ನೇಮಿಸಿಕೊಂಡ ಮಾಲೀಕರಿಗೆ 50,000 ರೂ.ಗಳ ವರೆಗೆ ದಂಡ ಅಥವಾ ಎರಡು ವರ್ಷ ಜೈಲು ಶಿಕ್ಷೆಗೆ ಒಳಪಡಿಸಲಾಗುತ್ತದೆ. ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಶಾಲೆಗೆ ಕಳುಹಿಸಬೇಕೆಂದರು.

ಕಾರ್ಯಕ್ರಮದಲ್ಲಿ ಅಫಜಲಪೂರ ತಹಶೀಲ್ದಾರ ನಾಗಮ್ಮಾ ಎಂ.ಕೆ., ತಾಲೂಕಾ ಸೇವಾ ಸಮಿತಿಯ ಕಾರ್ಯನಿರ್ವಾಹಕ ಕಾರ್ಯದರ್ಶಿಗಳು ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಎಸ್. ಲೋಖಂಡೆ, ತಾಲೂಕಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಮ್.ಎಲ್. ಪಟೇಲ್, ಪೊಲೀಸ್ ನಿರೀಕ್ಷಕ ವಿಶ್ವನಾಥ ಎಂ.ಆರ್., ಮೇಲ್ವಿಚಾರಕಿ ಶಿವಲೀಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗಲಮಡಿ, ಹಿರಿಯ ನ್ಯಾಯವಾದಿಗಳಾದ ಎಸ್.ಜಿ. ಹೂಲ್ಲೂರು, ಕೆ.ಜಿ. ಪೂಜಾರಿ ಹಾಗೂ ಕಲಬುರಗಿ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಉಪಸ್ಥಿತರಿದ್ದರು.