ಅಫೀಮು ಮಾರಾಟ ಆರೋಪಿ ಸೆರೆ

ಬೆಂಗಳೂರು,ಏ.13- ಸಿಟಿ ಮಾರುಕಟ್ಟೆಯ ಎಸ್.ಕೆ.ಆರ್. ಕಾಂಪ್ಲೆಕ್ಸ್ ನೆಲಮಹಡಿಯ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರಿಗೆ ಅಫೀಮು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಸುರೇಶ್ ಕುಮಾರ್ (23) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ‌ತಿಳಿಸಿದ್ದಾರೆ.
ಬಂಧಿತನಿಂದ 180 ಗ್ರಾಂ ಅಫೀಮು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಸಿಟಿ ಮಾರ್ಕೆಟ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರಸ್ವಾಮಿ ಹಾಗೂ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಆರೋಪಿ ನೀಡಿದ ಮಾಹಿತಿ ಮೇರೆಗೆ ಆತನ ಮನೆಯಲ್ಲಿ ದಾಸ್ತಾನು ಮಾಡಿದ್ದ 90 ಗ್ರಾಂ ತೂಕದ ಅಫೀಮು ವಶಪಡಿಸಿಕೊಂಡಿದ್ದಾರೆ. ಆರೋಪಿಯ ಬಳಿಯಿಂದ 1 ಕೆಜಿ 90 ಗ್ರಾಂ ತೂಕದ ಅಫೀಮು ವಶಪಡಿಸಿಕೊಳ್ಳುವಲ್ಲಿ ಸಿಟಿ ಮಾರ್ಕೆಟ್ ಪೊಲೀಸರು ಯಶಸ್ವಿಯಾಗಿದ್ದಾರೆ.