ಅಬ್ದುಲ್ ಘನಿ ತಾಹಿರ್ ನೇಮಕ

ಸಂಜೆವಾಣಿ ವಾರ್ತೆ

ದಾವಣಗೆರೆ.ಮಾ.೧೮ : ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಅಬ್ದುಲ್ ಘನಿ ತಾಹಿರ್ ಅವರನ್ನು ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿಗೆ ನಾಮ ನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ನೀಡಿದೆ.ಅಬ್ದುಲ್ ಘನಿ ತಾಹಿರ್ ಅವರು ವಿದ್ಯಾರ್ಥಿ ಕಾಂಗ್ರೆಸ್‌ನಿAದ ಪಕ್ಷದ ವಿವಿಧ ಘಟಕಗಳಲ್ಲಿ ಸೇವೆ ಮಾಡಿರುವುದನ್ನು ಗುರುತಿಸಿ ಹಾಗೂ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರ ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿಗೆ ನಾಮ ನಿರ್ದೇಶನ ಮಾಡಿದೆ.ಅಲ್ಪಸಂಖ್ಯಾತರ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ, ಕಾಂಗೆಸ್ ಅಲ್ಪಸಂಖ್ಯಾತ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಸಾಬ್, ರಾಜ್ಯ ವಕ್ಫ್ ಬೋರ್ಡ್ ಚೇರ್ಮನ್ ಅನ್ವರ್ ಬಾಷಾ,ಜಿಲ್ಲಾ ವಕ್ಫ್ ಬೋರ್ಡ್ ಚೇರ್ಮನ್ ಮೊಮ್ಮದ್ ಸಿರಾಜ್ ಹಾಗೂ ಮೊಮ್ಮದ್ ಇರ್ಷಾದ್ ನಾಮನಿರ್ದೇಶನಕ್ಕೆ ಕಾರಣಕರ್ತರಾಗಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.